ಅಂಗನೆಯರೆಲ್ಲ ನೆರೆದು

ಅಂಗನೆಯರೆಲ್ಲ ನೆರೆದು

ಪಲ್ಲವಿ: ಅಂಗನೆಯರೆಲ್ಲ ನೆರೆದು ಚಪ್ಪಾಳಿಕ್ಕುತ ದಿವ್ಯ ಮಂಗಳ ನಾಮವ ಪಾಡಿ ರಂಗನ ಕುಣಿಸುವರು ಚರಣಗಳು: 1: ಪಾಡಿ ಮಲ್ಹಾರಿ ಭೈರವಿ ಸಾರಂಗ ದೇಶಿ ಗುಂಡಕ್ರಿಯ ಗುರ್ಜರಿ ಕಲ್ಯಾಣಿ ರಾಗದಿ ತಂಡ ತಂಡದಲಿ ನೆರೆದು ರಂಗನ ಉಡಿಯ ಘಂಟೆ ಘಣ್ ಘಣ್ ಘಣ್ ಘಣಿರೆಂದು ಹಿಡಿದು ಕುಣಿಸುವರು 2: ತಿತ್ತಿರಿ ಮೇಳರಿ ತಾಳ ದಂಡಿಗೆ ಮದ್ದಲೆ ಉತ್ತಮದ ಶಂಖ ಶಬ್ದ ನಾದಗಳಿಂದ ಸುತ್ತ ಮುತ್ತಿ ನಾರಿಯರ ತತ್ತೈ ತತ್ತೈ ಥಾಯೆಂದು ಅರ್ತಿಯಿಂದ ಕುಣಿಸುವರು ಪರವಸ್ತುವ ಹಿಡಿದು 3: ಕಾಮಿನಿಯರೆಲ್ಲ ನೆರೆದು ಕಂದನಾಟಗಳನಾಡಿ ಪ್ರೇಮದಿಂದ ಬಿಗಿದಪ್ಪಿ ಮುದ್ದಾಡಿ ಕಾಮಿತ ಫಲವೀವ ಭಕುತ ಜನರೊಡೆಯ ಸ್ವಾಮಿ ಪುರಂದರ ವಿಟ್ಠಲರಾಯನ್ನ
ದಾಸ ಸಾಹಿತ್ಯ ಪ್ರಕಾರ
ಬರೆದವರು