ಇವಗೇಕೆ ಶೃಂಗಾರ?

ಇವಗೇಕೆ ಶೃಂಗಾರ?

ಪಲ್ಲವಿ: ಇವಗೇಕೆ ಶೃಂಗಾರ? ಇವಗೇಕೆ ಬಂಗಾರ? ಅನುಪಲ್ಲವಿ: ಕಾಡ ಕರಡಿಯಂತೆ ಪೋಲುವ ದೇಹಕ್ಕೆ ಚರಣಗಳು: ನೀರೊಳಗೆ ಮುಳುಗಿದವಗೆ ಪರಿಮಳ ಗಂಧವೇಕೆ ಭಾರ ಪೊತ್ತವಗೆ ಪನ್ನೀರು ಏಕೆ? ಕೋರೆ ದಾಡೆಯ ಘೋರ ಮುಖಗೇಕೆ ಕನ್ನಡಿ ಕರುಳ ಹಾರ ಧರಿಸಿದವಕೆ ಹಾರ ಪದಕವೇಕೆ? ನೆಲವನಳೆದವಗೆ ಕಾಲ ಕಿರುಗೆಜ್ಜೆ ಏಕೆ ತಲೆ ತಾಯ ತರಿದವಗೆ ಮರಿಯಾದೆಯೇಕೆ? ಚೇಲಾರಿವೆಯ ಉಟ್ಟವಗೇಕೆ ಪೀತಾಂಬರ ಪಾಲ ಕದ್ದು ಕುಡಿದವಗೆ ಕುಸುಮ ಕೇಸರಿಯೇಕೆ? ಬತ್ತಲೆ ನಿಂತಿದ್ದವಗೆ ಕಸ್ತೂರಿ ತಿಲಕವೇಕೆ ಉತ್ತಮ ಹಯವನೇರಿದವಕೆ ಪುಷ್ಪಕವೇಕೆ? ಚಿತ್ತಜನಯ್ಯ ಶ್ರೀ ಪುರಂದರ ವಿಟ್ಠಲ ಭಕ್ತರ ಸಲಹುವಗೆ ಬಹಿರಂಗದಾಭರಣವೇಕೆ?
ದಾಸ ಸಾಹಿತ್ಯ ಪ್ರಕಾರ
ಬರೆದವರು