ಕುಲ ಕುಲ ಕುಲವೆಂದು ಹೊಡೆದಾಡದಿರಿ

ಕುಲ ಕುಲ ಕುಲವೆಂದು ಹೊಡೆದಾಡದಿರಿ

ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ || ಪಲ್ಲವಿ || ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ ಅಟ್ಟು ಉಣ್ಣದ ವಸ್ತುಗಳಿಲ್ಲ ಕುಟಕಾಣಿಸ ಬಂದು ಹಿರಿದೇನು ಕಿರಿದೇನು ನೆಟ್ಟನೆ ಸರ್ವಜ್ಞನ ನೆನೆಕಂಡ್ಯಾ ಮನುಜ || ೧ || ಜಲವೆ ಸಕಲ ಕುಲಕ್ಕೆ ತಾಯಲ್ಲವೆ ಜಲದ ಕುಲವನೇನಾದರೂ ಬಲ್ಲಿರಾ ಜಲದೊಕುಳಿಯಂತೆ ಸ್ಥಿರವಲ್ಲ ಈ ದೇಹ ನೆಲೆಯ ಅರಿತು ನೀ ನೆನೆಕಂಡ್ಯಾ ಮನುಜ || ೨ || ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ ಹರಿಮಯವೆಲ್ಲವೆನುತ ತಿಳಿದು ಸಿರಿಕಾಗಿನೆಲೆಯಾದಿ ಕೇಶ ವರಾಯನ ಚರಣ ಕಮಲವ ಕೀರ್ತಿಸುವನೇ ಕುಲಜ || ೩ ||
ದಾಸ ಸಾಹಿತ್ಯ ಪ್ರಕಾರ
ಬರೆದವರು