ಧರಣಿಗೆ ದೊರೆಯೆಂದು ನಂಬಿದೆ

ಧರಣಿಗೆ ದೊರೆಯೆಂದು ನಂಬಿದೆ

ಪಲ್ಲವಿ: ಧರಣಿಗೆ ದೊರೆಯೆಂದು ನಂಬಿದೆ ಇಂಥ ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ ಚರಣಗಳು: ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ ಓಡಿ ನೀರೊಳು ಸೇರಿಕೊಂಡೆ ಬೇಗ ಹೇಡಿಯ ತೆರದಲಿ ಮೋರೆಯ ತೋರದೆ ಓಡಿ ಅರಣ್ಯದಿ ಮೃಗಗಳ ಸೇರಿದೆ ಬಡವರ ಬಿನ್ನಹ ಲಾಲಿಸದೆ ಹಲ್ಲ ಕಡುಕೋಪದಲಿ ತೆರೆದಂಜಿಸಿದೆ ತಡೆಯದೆ ಭಿಕ್ಷುಕನಾದರು ಬಿಡರೆಂದು ಕೊಡಲಿಯ ಪಿಡಿದು ಕೋಡಗ ಹಿಂಡ ಕಾಯ್ದೆ ಉತ್ತಮನೆಂದರೆ ಮತ್ತೆ ಚೋರನಾದೆ ಬತ್ತಲೆ ನಿಂತೆ ತೇಜಿಯನೇರಿದೆ ಎತ್ತ ಹೋದರು ಬಿಡೆ ಮತ್ತೆ ನಿನ್ನನು ದೇವ ಚಿತ್ತಜ ಜನಕ ಶ್ರೀ ಪುರಂದರ ವಿಟ್ಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು