ಧವಳ ಗಂಗೆಯ ಗಂಗಾಧರ ಮಹಾಲಿಂಗ

ಧವಳ ಗಂಗೆಯ ಗಂಗಾಧರ ಮಹಾಲಿಂಗ

ರಾಗ: ಮೋಹನ ತಾಳ: ಝಂಪಾ ಧವಳ ಗಂಗೆಯ ಗಂಗಾಧರ ಮಹಾಲಿಂಗ ಮಾ ಧವನ ತೋರೋ ಗುರುಕುಲೋತ್ತುಂಗಾ ಅರ್ಚಿಸಿದವರಿಗಭೀಷ್ಟವ ಕೊಡುವ ಹೆಚ್ಚಿನ ಅಘಗಳ ತರಿದು ಬಿಸುಟುವಾ ದುಶ್ಚರಿತಗಳೆಲ್ಲ ದೂರದಲ್ಲಿಡುವ ನ ಮ್ಮಚ್ಚುತಗಲ್ಲದ ಅಸುರರ ಬಡಿವಾ ಮಾರನ ಗೆದ್ದ ಮನೋಹರ ಮೂರ್ತಿ ಸಾಧು ಸಜ್ಜನರಿಗೆ ಸುರ ಚಕ್ರವರ್ತಿ ಧಾರುಣಿಯೊಳಗೆ ತುಂಬಿದೆ ನಿಮ್ಮ ಕೀರ್ತಿ ಮುರಾರಿಯ ತೋರಿಸಯ್ಯ ನಿಮಗೆ ಶರಣಾರ್ಥಿ ಚನ್ನ ಪ್ರಸನ್ನ ಶ್ರೀ ಹಯವದನನ್ನ ಅನುದಿನ ನೆನೆವಂತೆ ಮಾಡೊ ನೀ ಎನ್ನ ಅನ್ಯವಲ್ಲವೊ ನಾನು ಗುರುವೆಂಬೆ ನಿನ್ನ ಇನ್ನಾದರೂ ತೋರೋ ಧೀರ ಮುಕ್ಕಣ್ಣ
ದಾಸ ಸಾಹಿತ್ಯ ಪ್ರಕಾರ
ಬರೆದವರು