ನಮಃ ಪಾರ್ವತೀ ಪತಿ ನುತಜನಪರ

ನಮಃ ಪಾರ್ವತೀ ಪತಿ ನುತಜನಪರ

ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ ರಮಾರಮಣನಲ್ಲಮಲಭಕುತಿ ಕೊಡು ನಮೋ ವಿಶಾಲಾಕ್ಷ ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತರಕ್ಷ ಫಾಲನೇತ್ರ ಕಪಾಲ ರುಂಡಮಣಿ ಮಾಲಾ ಧೃತ ವಕ್ಷ ಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷ ಶ್ರೀಲಕುಮೀಶನ ಓಲೈಸುವ ಭಕ್ತಾವಳಿಗಳ ಪಕ್ಷ ವಾಸವನುತ ಹರಿದಾಸ ಈಶ ಕೈಲಾಸ ವಾಸ ದೇವ ದಾಶರಥಿಯ ಔಪಾಸಕ ಸುಜನರ ಪೋಷಿಪ ಪ್ರಭಾವ ಭಾಸಿಸುತಿಹುದು ಅಶೇಷ ಜೀವರಿಗೆ ಈಶನೆಂಬ ಭಾವ ಶ್ರೀಶನಲ್ಲಿ ಕೀಲಿಸು ಮನವ ಗಿರಿಜೇಶ ಮಹಾದೇವ ಮೃತ್ಯುಂಜಯ ನಿನ್ನುತ್ತಮ ಪದಯುಗ ಭೃತ್ಯನೋ ಸರ್ವತ್ರ ಹತ್ತಿರ ಕರೆದು ಅಪತ್ಯನಂತೆ ಪೊರೆಯುತ್ತಿರೋ ತ್ರಿನೇತ್ರ ತೆತ್ತಿಗನಂತೆ ಕಾಯುತ್ತಿಹೆ ಬಾಣನ ಸತ್ಯದಿ ಸುಚರಿತ್ರ ಕರ್ತೃ ಉಡುಪಿ ಸರ್ವೋತ್ತಮ ಕೃಷ್ಣನ ಪೌತ್ರ ಕೃಪಾ ಪಾತ್ರ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ