ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ ||ಪಲ್ಲವಿ|| ನಾದಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆನು ||ಅನು|| ಜ್ಞಾನವೆಂಬ ನವರತ್ನದ ಮಂಟಪದ ಮಧ್ಯದಲಿ ವೇಣುಲೋಲನ ಕುಳ್ಳಿರಿಸಿ ಮೋದದಿಂದ ಭಜಿಸುವೆನು ||೧|| ಭಕ್ತಿ ರಸವೆಂಬ ಮುದ್ದು ಮಾಣಿಕ್ಯದ ಹರಿವಾಣದಿ ಮುಕ್ತನಾಗಬೇಕು ಎಂದು ಮುತ್ತಿನಾರತಿ ಎತ್ತುವೆನು ||೨|| ನಿನ್ನ ನಾನು ಬಿಡುವನಲ್ಲ ಎನ್ನ ನೀನು ಬಿಡಲು ಸಲ್ಲ ಘನ್ನ ಮೂರುತಿ ವಿಜಯವಿಠಲ ಕೇಳೊ ನಿನ್ನ ಭಕ್ತರ ಸೊಲ್ಲ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು