ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ

ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ

೧: ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ ಎರಡು ಬರಿದು ಒಂದು ತುಂಬಲೇ ಇಲ್ಲ ೨: ತುಂಬಲಿಲ್ಲದ ಕೆರೆಗೆ ಬಂದರು ಮೂವರೊಡ್ಡರು ಇಬ್ಬರು ಕುಂಟರು ಒಬ್ಬಗೆ ಕಾಲೇ ಇಲ್ಲ ೩: ಕಾಲಿಲ್ಲದ ಒಡ್ಡರಿಗೆ ಕೊಟ್ಟರು ಮೂರು ಎಮ್ಮೆಗಳ ಎರಡು ಬರಡು ಒಂದಕ್ಕೆ ಕರುವೇ ಇಲ್ಲ ೪: ಕರುವಿಲ್ಲದ ಎಮ್ಮೆಗೆ ಕೊಟ್ಟರು ಮೂರು ಹೊನ್ನುಗಳ ಎರಡು ಸವಕಲು ಒಂದು ಸಲ್ಲಲೇ ಇಲ್ಲ ೫: ಸಲ್ಲದ ಹೊನ್ನುಗಳಿಗೆ ಬಂದರು ಮೂರು ನೋಟಗರು ಇಬ್ಬರು ಕುರುಡರು ಒಬ್ಬಗೆ ಕಣ್ಣೇ ಇಲ್ಲ ೬: ಕಣ್ಣಿಲ್ಲದ ನೋಟಗರಿಗೆ ಕೊಟ್ಟರು ಮೂರು ಊರುಗಳ ಎರಡು ಹಾಳು ಒಂದಕ್ಕೆ ಒಕ್ಕಲೇ ಇಲ್ಲ ೭: ಒಕ್ಕಲಿಲ್ಲದ ಊರಿಗೆ ಬಂದರು ಮೂವರು ಕುಂಬಾರರು ಇಬ್ಬರು ಚೊಂಚರು ಒಬ್ಬಗೆ ಕೈಯೇ ಇಲ್ಲ ೮: ಕೈಯಿಲ್ಲದ ಕುಂಬರರು ಮಾಡ್ಯಾರು ಮೂರು ಮಡಕೆಗಳ ಎರಡು ಒಡಕು ಒಂದಕ್ಕೆ ಬುಡವೇ ಇಲ್ಲ ೯: ಬುಡವಿಲ್ಲದ ಗಡಿಗೆಗೆ ಹಾಕಿದರು ಅಕ್ಕಿಗಳ ಎರಡು ಹಂಜಕ್ಕಿ ಒಂದು ಬೇಯಲೇ ಇಲ್ಲ ೧೦: ಬೇಯಲಿಲ್ಲದ ಅಕ್ಕಿಗೆ ಬಂದರು ಮೂವರು ನೆಂಟರು ಇಬ್ಬರು ಉಣ್ಣರು ಒಬ್ಬಗೆ ಹಸಿವೇ ಇಲ್ಲ ೧೧: ಹಸಿವಿಲ್ಲದ ನೆಂಟರಿಗೆ ಕೊಟ್ಟರು ಮೂರು ಟೊಣೆಪೆಗಳ ಎರಡು ಸೋಕವು ಒಂದು ತಾಕಲೇ ಇಲ್ಲ ೧೨: ಇನ್ನು ಈ ಅರ್ಥಗಳೆಲ್ಲ ಪುರಂದರ ವಿಟ್ಠಲ ಬಲ್ಲ ಅನ್ಯರು ಯಾರು ತಿಳಿದವರಿಲ್ಲ (ಅಥವಾ) ತಾಕಲಿಲ್ಲದ ಟೊಣೆಪೆಗಳ ತಾಕಿಸಿ ಸದ್ಗತಿಯನು ಈಯಬೇಕು ಪುರಂದರ ವಿಟ್ಠಲರಾಯ!