ಏನು ಧನ್ಯಳೋ ಲಕುಮಿ
(ರಾಗ ತೋಡಿ ಅಟತಾಳ)
ಏನು ಧನ್ಯಳೋ ಲಕುಮಿ
ಎಂಥ ಮಾನ್ಯಳೋ
ಸಾನುರಾಗದಿಂದ ಹರಿಯ
ತಾನೆ ಸೇವೆ ಮಾಡುತಿಹಳೋ ||ಪ|
ಕೋಟಿ ಕೋಟಿ ಭೃತ್ಯರಿರಲು
ಹಾಟಕಾಂಬರನ ಸೇವೆ
ಸಾಟಿಯಿಲ್ಲದೆ ಮಾಡಿ
ಪೂರ್ಣನೋಟದಿಂದ ಸುಖಿಸುತಿಹಳೋ || ೧||
ಛತ್ರ ಚಾಮರ ವ್ಯಜನ ಪರ್ಯಂಕ
ಪಾತ್ರರೂಪದಲ್ಲಿ ನಿಂತು
ಚಿತ್ರಚರಿತನಾದ ಹರಿಯ
ನಿತ್ಯಸೇವೆ ಮಾಡುತಿಹಳೋ ||೨||
ಸರ್ವಸ್ಥಳದಿ ವ್ಯಾಪ್ತನಾದ
ಸರ್ವದೋಷರಹಿತನಾದ
ಸರ್ವವಂದ್ಯನಾದ ಪುರಂದರ
ವಿಟ್ಠಲನ್ನ ಸೇವಿಸುವಳೋ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments