ಏನು ಪೇಳಲೆ ಗೋಪಿ

ಏನು ಪೇಳಲೆ ಗೋಪಿ

( ರಾಗ ಆನಂದಭೈರವಿ. ಛಾಪು ತಾಳ) ಏನು ಪೇಳಲೆ ಗೋಪಿ ನಿನ್ನ ಮಗನ ಜಾಲ ಮಾನ ತಪ್ಪಿ ಬಂದ ಮನೆಯೊಳಗೆ ||ಪ|| ಕೊಡ ಹಾಲು ಕುಡಿದನೆ ಗಡಿಗೆಯನೊಡೆದನೆ ಅಡಗಿದ್ದನೆ ದೊಡ್ಡ ಕೊಡದೊಳಗೆ ಹುಡುಗ ಸಿಕ್ಕಿದನೆಂದು ಹೊಡೆಯಲು ಹೋದರೆ ಬಡವರ ಮಗನೇನೆ ಹೊಡೆಯಲಿಕ್ಕೆ || ಅಳಿಯನ ವೇಷದಿ ಮಗಳ ಕರೆಯ ಬಂದ ಕಲಹ ಮಾಡಿ ತಾ ಕಳಿಸೆಂದ ಒಲುಮೆಯಿಂದಲಿ ತಿಂಗಳೆರಡಿಟ್ಟುಕೊಂಡರೆ ಗಿಳಿಯಂಥ ಹೆಣ್ಣಿನ ಕೆಡಿಸಿದನೆ ಗೋಪಿ || ಇಷ್ಟೊಂದು ಸಿಟ್ಟೇಕೆ ಚಿಣ್ಣ ಕೃಷ್ಣನ ಮೇಲೆ ಪುಟ್ಟಿಸಬೇಡಿರೆ ಅನ್ಯಾಯವ ಸೃಷ್ಟಿಗೊಡೆಯ ನಮ್ಮ ಪುರಂದರವಿಠಲನ ದೃಷ್ಟಿಸಿ ನೋಡಿರೆ ತೊಟ್ಟಿಲಿನೊಳಗೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು