ಏಳು ನಾರಾಯಣ ಏಳು ಲಕ್ಷ್ಮೀರಮಣ

ಏಳು ನಾರಾಯಣ ಏಳು ಲಕ್ಷ್ಮೀರಮಣ

ಏಳು ನಾರಾಯಣ ಏಳು ಲಕ್ಷ್ಮೀರಮಣ ಏಳು ಶ್ರೀಗಿರಿಗೊಡೆಯ ಶ್ರೀವೆಂಕಟೇಶ ಏಳಯ್ಯ ಬೆಳಗಾಯಿತು || ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ ಶೇಷಶಯನನೆ ಏಳು ಸಮುದ್ರ ಮಂಥನವ ಮಾಡು ದೇಶ ಕೆಂಪಾಯಿತು ಏಳಯ್ಯ ಹರಿಯೇ || ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ ಸುರರು ತಂದಿದ್ದಾರೆ ಬಲು ಭಕುತಿಯಿಂದ ಅರವಿಂದನಾಭ ಸಿರಿವಿಧಿಭವಾದಿಗಳೊಡೆಯ ಹಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ || ದಾಸರೆಲ್ಲರು ಬಂದು ಧೂಳಿನದರ್ಶನಕೊಂಡು ಲೇಸಾಗಿ ತಾಳ ದಂಡಿಗೆಯ ಪಿಡಿದು ಶ್ರೀಶನೆಲೆಯಾದಿ ಕೇಶವ ನಿಮ್ಮ ಪಾದವನು ಲೇಸಾಗಿ ಸ್ಮರಿಸಿ ಪೊಗಳುವರು ಹರಿಯೇ || ಇದೇ ಹಾಡನ್ನು ನಾವು ಪ್ರತಿ ಶನಿವಾರ ನಮ್ಮ ಊರಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಳದಲ್ಲಿ ಬೆಳಗ್ಗೆ ಬಾಗಿಲು ತೆರೆಯುವ ಮೊದಲು ಹಾಡುತ್ತೇವೆ.
ದಾಸ ಸಾಹಿತ್ಯ ಪ್ರಕಾರ
ಬರೆದವರು