ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿದೆ

ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿದೆ

(ರಾಗ ಕಾಂಭೋಜ ತ್ರಿಪುಟತಾಳ) ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿದೆ ||ಪ|| ಕಷ್ಟಗಳೆಲ್ಲಾ ಪರಿಹರಿಸಿ ಮನ- ದಿಷ್ಟಾರ್ಥಗಳನೆಲ್ಲಾ ಕೊಟ್ಟು ರಕ್ಷಿಸುವಂಥ || ಅ|| ಮಸ್ತಕದಲಿ ಮಾಣಿಕ್ಯದ ಕಿರೀಟ ಕಸ್ತೂರಿ ತಿಲಕದಿಂದೆಸೆವ ಲಲಾಟ ಶಿಸ್ತಿಲಿ ಕೊಳಲನೂದುವ ಓರೆ ನೋಟ ಕೌಸ್ತುಭ ಎಡಬಲದಲಿ ಓಲಾಟ || ೧|| ಮಘಮಘಿಸುವ ಸೊಬಗಿನ ಸುಳಿಗುರುಳು ಚಿಗುರು ತುಳಸಿ ವನಮಾಲೆಯ ಕೊರಳು ಬಗೆ ಬಗೆ ಹೊನ್ನುಂಗುರವಿಟ್ಟ ಬೆರಳು ಸೊಬಗಿನ ನಾಭಿಯ ತಾವರೆ ಯರಳು ||೨|| ಉಡುದಾರ ವಡ್ಡ್ಯಾಣ ನಿಖಿಲಾಭರಣ ಉಡುಗೆ ಪೀತಾಂಬರ ರವಿಶತ ಕಿರಣ ಕಡಗ ನೂಪುರ ಗೆಜ್ಜೆಗಳನಿಟ್ಟ ಚರಣ ಒಡೆಯ ಶ್ರೀಪುರಂದರ ವಿಠಲನ ಕರುಣ || ೩||
ದಾಸ ಸಾಹಿತ್ಯ ಪ್ರಕಾರ
ಬರೆದವರು