ತಾಳುವಿಕೆಗಿಂತ ತಪವು ಇಲ್ಲ

ತಾಳುವಿಕೆಗಿಂತ ತಪವು ಇಲ್ಲ

ತಾಳುವಿಕೆಗಿಂತ ತಪವು ಇಲ್ಲ ಕೇಳಬಲ್ಲವರಿಗೆ ಹೇಳುವೆನು ಸೊಲ್ಲ| ದುಷ್ಟ ಮನುಜರು ಪೇಳ್ವ ನಿಷ್ಠುರದ ನುಡಿ ತಾಳು ಕಷ್ಟ ಬಂದರೆ ತಾಳು ಕಂಗೆಡದೆ ತಾಳು| ನೆಟ್ಟ ಸಸಿ ಫಲ ಬರುವ ತನಕ ಶಾಂತಿಯ ತಾಳು ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು|| ಹಳಿದು ಹಂಗಿಸುವಂಥ ಹಗೆಯ ಮಾತನು ತಾಳು ಸುಳಿನುಡಿ ಕುಹಕ ಕುಮಂತ್ರವನು ತಾಳು| ಅಳುಕದಲೆ ಬಿರುಸು ಬಿಂಕದ ನುಡಿಯ ನೀ ತಾಳು ಹಲಧರಾನುಜನನ್ನು ಹೃದಯದಿ ತಾಳು|| ನಕ್ಕು ನುಡಿವರ ಮುಂದೆ ಮುಕ್ಕರಿಸದೆ ತಾಳು ಅಕ್ಕಸವ ಮಾಡುವರ ಅಕ್ಕರದಿ ತಾಳು| ಉಕ್ಕೋ ಹಾಲಿಗೆ ನೀರನಿಕ್ಕುವಂದದಿ ತಾಳು ಪಕ್ಷೀಶ ಹಯವದನ ಶರಣೆಂದು ಬಾಳು||
ದಾಸ ಸಾಹಿತ್ಯ ಪ್ರಕಾರ
ಬರೆದವರು