Skip to main content

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ
ಕೊಳಗದಲಿ ಹಣಗಳನು ಅಳೆದು ಕೊಂಬ
ಇಲ್ಲ ಕಾಸು ಎಂದು ಸುಳ್ಳು ಮಾತಾಡಿದರೆ
ಎಲ್ಲವನು ಕಸುಕೊಂಬ ಕಳ್ಳದೊರೆಗೆ
ಜಯ ಮಂಗಳಂ| ನಿತ್ಯ ಶುಭ ಮಂಗಳಂ|

ತನ್ನ ನೋಡೇನೆಂದು ಮುನ್ನೂರು ಗಾವುದ ಬರಲು
ತನ್ನ ಗುಡಿಯ ಪೊಕ್ಕ ಜನರಿಗೆಲ್ಲ
ಹೊನ್ನು ಹಣಗಳ ಕಸಿದು ತನ್ನ ದರುಶನ ಕೊಡದೆ
ಬೆನ್ನೊಡೆಯ ಹೊಯ್ಯಿಸುವ ಅನ್ಯಾಯಕಾರಿಗೆ
ಜಯ ಮಂಗಳಂ| ನಿತ್ಯ ಶುಭ ಮಂಗಳಂ|

ಗಿಡ್ಡ ಹಾರುವನಾಗಿ ಒಡ್ಡಿ ದಾನವ ಬೇಡಿ
ದುಡ್ಡು ಕಾಸುಗಳಿಗೆ ಕೈಯ ನೀಡಿ
ಅಡ್ಡ ಬಿದ್ದ ಜನರ ವಿಡ್ದೂರಗಳ ಕಳೆದು
ದೊಡ್ಡವರ ಮಾಳ್ಪ ಸಿರಿ ವಿಜಯ ವಿಠಲಗೆ
ಜಯ ಮಂಗಳಂ| ನಿತ್ಯ ಶುಭ ಮಂಗಳಂ|

(ಸಂದರ್ಭ : ತಿರುಪತಿಯಲ್ಲಿ, ಬ್ರಹ್ಮೋತ್ಸವ ಸಮಯದಲ್ಲಿ, ವಿಜಯದಾಸರಿಗೆ ದೈವ ದರುಶನ ದೊರೆಯದಿದ್ದಾಗ, ದೇವರನ್ನು ಉದ್ದೇಶಿಸಿ ಹಾಡಿದ ಪದವಿದೆಂದು ಹೇಳಲಾಗುತ್ತದೆ.)

ದಾಸ ಸಾಹಿತ್ಯ ಪ್ರಕಾರ: 
ಬರೆದವರು: