ನಾರಾಯಣನೆಂಬ ನಾಮವ

ನಾರಾಯಣನೆಂಬ ನಾಮವ

(ರಾಗ ಬಿಲಹರಿ ಅಟತಾಳ ) ನಾರಾಯಣನೆಂಬ ನಾಮವ ನಿಮ್ಮ ನಾಲಿಗೆ ತುದಿಯಿಂದಲಿ ಬಿತ್ತಿರಯ್ಯ ||ಪ|| ಹೃದಯ ಹೊಲವ ಮಾಡಿ ಮನವ ನೇಗಿಲ ಮಾಡಿ ಶ್ವಾಸೋಚ್ಛ್ವಾಸ ಎರಡೆತ್ತು ಮಾಡಿ ಜ್ಞಾನವೆಂಬ ಹಗ್ಗ ಕಣ್ಣಿಯ ಮಾಡಿ ನಿರ್ಮಮವೆಂಬ ಗುಂಟೆಲಿ ಹರವಿರಯ್ಯ || ಮದ ಮತ್ಸರಗಳೆಂಬ ಮರಗಳನೆ ತರಿದು ಕಾಮ ಕ್ರೋಧಗಳೆಂಬ ಕಳೆಯ ಕಿತ್ತಿ ಪಂಚೇಂದ್ರಿಯವೆಂಬ ಮಂಚಿಕೆಯನೆ ಹಾಕಿ ಚಂಚಲವೆಂಬ ಹಕ್ಕಿಯ ಹೊಡೆಯಿರಯ್ಯ ಉದಯಾಸ್ತಮಾನವೆಂಬ ಎರಡು ಕೊಳಗದಲ್ಲಿ ಆಯುಷ್ಯವೆಂಬ ರಾಶಿ ಅಳೆಯುತಿರೆ ಸ್ವಾಮಿ ಶ್ರೀ ಪುರಂದರವಿಠಲನ ನೆನೆದರೆ ಪಾಪರಾಶಿಯ ಪರಿಹರಿಸುವನಯ್ಯ ||
ದಾಸ ಸಾಹಿತ್ಯ ಪ್ರಕಾರ
ಬರೆದವರು