Skip to main content

ಭೂಷಣಕೆ ಭೂಷಣ ಇದು ಭೂಷಣ

(ಸಾರಂಗ ರಾಗ ಝಂಪೆ ತಾಳ)

ಭೂಷಣಕೆ ಭೂಷಣ ಇದು ಭೂಷಣ
ಶೇಷಗಿರಿವಾಸ ಶ್ರೀ ವರವೆಂಕಟೇಶ ||ಪ||

ನಾಲಿಗ್ಗೆ ಭೂಷಣ ನಾರಾಯಣ ನಾಮ
ಕಾಲಿಗೆ ಭೂಷಣ ಹರಿಯಾತ್ರೆಯು
ಆಲಯಕೆ ಭೂಷಣ ತುಲಸಿ ವೃಂದಾವನ ವಿ-
ಶಾಲ ಕರ್ಣಕೆ ಭೂಷಣ ವಿಷ್ಣುಕಥೆಯು ||೧||

ದಾನವೇ ಭೂಷಣ ಇರುವ ಹಸ್ತಂಗಳಿಗೆ
ಮಾನವೇ ಭೂಷಣ ಮಾನವರಿಗೆ
ಜ್ಞಾನವೇ ಭೂಷಣ ಮುನಿಯೋಗಿವರರಿಗೆ
ಮಾನಿನಿಗೆ ಭೂಷಣ ಪತಿಭಕ್ತಿಯು ||೨||

ರಂಗನನು ನೋಡುವುದೇ ಕಂಗಳಿಗೆ ಭೂಷಣ
ಮಂಗಳಾಂಗಗೆ ಮಣಿವ ಶಿರ ಭೂಷಣ
ಶೃಂಗಾರ ತುಲಸಿ ಮಣಿ ಕೊರಳಿಗೆ ಭೂಷಣ
ರಂಗವಿಠಲ ನಿಮ್ಮ ನಾಮ ಅತಿ ಭೂಷಣ ||೩||

ದಾಸ ಸಾಹಿತ್ಯ ಪ್ರಕಾರ: 
ಬರೆದವರು: