ಮಂಗಳಂ ಜಯ ಮಂಗಳಂ

ಮಂಗಳಂ ಜಯ ಮಂಗಳಂ

(ರಾಗ ಸುರುಟಿ ಆದಿತಾಳ) ಮಂಗಳಂ ಜಯ ಮಂಗಳಂ ||ಪ|| ಮುಕುಟಕ್ಕೆ ಮಂಗಳ ಮತ್ಸ್ಯವತಾರಗೆ ಮುಖಕ್ಕೆ ಮಂಗಳ ಮುದ್ದು ಕೂರ್ಮಗೆ ಸುಕಂಠಕೆ ಮಂಗಳ ಸೂಕರ ರೂಪಗೆ ನಖಕ್ಕೆ ಮಂಗಳ ನರಸಿಂಹಗೆ || ವಕ್ಷಕ್ಕೆ ಮಂಗಳ ವಟು ವಾಮನಗೆ ಪಕ್ಷಕ್ಕೆ ಮಂಗಳ ಪರಶುರಾಮಗೆ ಕಕ್ಷಕ್ಕೆ ಮಂಗಳ ಕಾಕುತ್ಸ್ಥರಾಮಗೆ ಕುಕ್ಷಿಗೆ ಮಂಗಳ ಶ್ರೀಕೃಷ್ಣಗೆ || ಊರುಗಳಿಗೆ ಮಂಗಳ ಉತ್ತಮಬೌದ್ಧಗೆ ಚರಣಕ್ಕೆ ಮಂಗಳ ಚೆಲುವ ಕಲ್ಕಿಗೆ ಪರಿಪರಿ ರೂಪಗೆ ಪರಮಾನಂದಗೆ ಪುರಂದರವಿಠಲಗೆ ಜಯಮಂಗಳಂ ||
ದಾಸ ಸಾಹಿತ್ಯ ಪ್ರಕಾರ
ಬರೆದವರು