ಮಕುಟಕ್ಕೆ ಮಂಗಳ

ಮಕುಟಕ್ಕೆ ಮಂಗಳ

ಮಕುಟಕ್ಕೆ ಮಂಗಳ ಮಚ್ಚಾವತಾರಗೆ ಮುಖಕ್ಕೆ ಮಂಗಳ ಮುದ್ದು ಕೂರ್ಮನಿಗೆ ಸುಕಂಠಕ್ಕೆ ಮಂಗಳ ಸೂಕರ ರೂಪಗೆ ನಖಕ್ಕೆ ಮಂಗಳ ನರಸಿಂಗಗೆ ವಕ್ಷಕ್ಕೆ ಮಂಗಳ ವಟು ವಾಮನನಿಗೆ ಪಕ್ಷಕ್ಕೆ ಮಂಗಳ ಭಾರ್ಗವಗೆ ಕಕ್ಷಕ್ಕೆ ಮಂಗಳ ಕಾಕುತ್ಸ ರಾಮಗೆ ಕುಕ್ಷಿಗೆ ಮಂಗಳ ಕೃಷ್ಣರಾಯಗೆ ಊರುಗಳಿಗೆ ಮಂಗಳ ಉತ್ತಮ ಬೌದ್ಧಗೆ ಚರಣಕ್ಕೆ ಮಂಗಳ ಚಲುವ ಕಲ್ಕಿಗೇ ಪರಿಪರಿ ಮಂಗಳ ಪರಮಾತ್ಮಗೆ ಪುರಂದರ ವಿಟ್ಠಲಗೆ ಜಯಮಂಗಳ
ದಾಸ ಸಾಹಿತ್ಯ ಪ್ರಕಾರ
ಬರೆದವರು