ಮಹಿಮೆ ಸಾಲದೇ ? ಇಷ್ಟೇ ಮಹಿಮೆ ಸಾಲದೇ?

ಮಹಿಮೆ ಸಾಲದೇ ? ಇಷ್ಟೇ ಮಹಿಮೆ ಸಾಲದೇ?

ಮಹಿಮೆ ಸಾಲದೆ ಇಷ್ಟೆ ಮಹಿಮೆ ಸಾಲದೆ ||ಪಲ್ಲವಿ|| ಅಹಿಶಯನನ ಒಲುಮೆಯಿಂದ ಮಹಿಯೊಳೆಮ್ಮ ಶ್ರೀಪಾದರಾಜರ ||ಅ.ಪ|| ಮುತ್ತಿನ ಕವಚ ಮೇಲ್ಕುಲಾವಿ ನವರತ್ನ ಕೆತ್ತಿದ ಕರ್ಣಕುಂಡಲ ಕಸ್ತೂರಿ ತಿಲಕ ಶ್ರೀಗಂಧ ಲೇಪನ ವಿಸ್ತಾರದಿಂದ ಮೆರೆದು ಬರುವ ||೧|| ವಿಪ್ರಗೆ ಬ್ರಹ್ಮಹತ್ಯೆ ದೋಷ ಬರಲು ಕ್ಷಿಪ್ರ ಶಂಖೋದಕದಿ ಕಳೆಯೆ ಅಪ್ರಬುದ್ಧರು ದೂಷಿಸೆ ಗೇರೆಣ್ಣೆ ಕಪ್ಪು ವಸನ ಹಸನ ಮಾಡಿದ ||೨|| ಹರಿಗೆ ಸಮರ್ಪಿಸಿದ ನಾನಾ ಪರಿಯ ಶಾಕಂಗಳನು ಭುಂಜಿಸೆ ನರರು ನಗಲು ಶ್ರೀಶ ಕೃಷ್ಣನ ಕರುಣದಿಂದ ಹಸಿಯ ಮಾಡಿದ ||೩||
ದಾಸ ಸಾಹಿತ್ಯ ಪ್ರಕಾರ