ಶ್ರೀಕಾಂತ ಎನಗಿಷ್ಟು ದಯಮಾಡೊ

ಶ್ರೀಕಾಂತ ಎನಗಿಷ್ಟು ದಯಮಾಡೊ

( ರಾಗ ಕಾನಡಾ ಅಟತಾಳ) ಶ್ರೀಕಾಂತ ಎನಗಿಷ್ಟು ದಯಮಾಡೊ ತಂದೆ ಏಕಾಂತದಲಿ ನಿನ್ನ ಭಜಿಸುವ ಸೌಭಾಗ್ಯ ||ಪ|| ಧನದಾಸೆಗಾಗಿ ನಾ ಧನಿಕರ ಮನೆಗಳ ಕೊನೆ ಬಾಗಿಲಲಿ ನಿಂದು ತೊಳಲಿ ಬಳಲಿದೆನೊ || ದೇಹಾಭಿಮಾನದಿಂದ ವಿಹಿತ ಧರ್ಮವ ತೊರೆದು ಸ್ನೇಹಾನುಬದ್ಧನಾಗಿ ಸತಿ ಸುತರ ಪೊರೆದೆನೊ || ಏನಾದರೇನೆನ್ನ ಹೀನಗುಣಗಳನೆಲ್ಲ ಮನ್ನಿಸಿ ಸಲಹೋ ಶ್ರೀಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು