ರುದ್ರ

ಲಿಂಗ ರಾಮಲಿಂಗ ಎನ್ನಂತರಂಗ

ಲಿಂಗ ರಾಮಲಿಂಗ ಎನ್ನಂತರಂಗ ಮಂಗಳಾಂಗನೆ ಸರ್ವೋತ್ತುಂಗನೇ ||ಪ|| ಮಂದಾಕಿನಿಧರಗೆ ಗಂಗಾಂಬು ಮಜ್ಜನವೇ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೇ ಇಂದು ರವಿ ನೇತ್ರನಿಗೆ ಕರ್ಪೂರದಾರತಿಯೇ ಕಂದರ್ಪ ಜಿತಗೆ ಮಿಗಿಲಾಪೇಕ್ಷೆಯೇ ಘನ ವಿದ್ಯಾತುರಗೆ ಮಂತ್ರ ಕಲಾಪವೇ?
ದಾಸ ಸಾಹಿತ್ಯ ಪ್ರಕಾರ
ಬರೆದವರು

ಕೈಲಾಸವಾಸ ಗೌರೀಶ ಈಶ

ರಚನೆ -ವಿಜಯದಾಸರು ಕೈಲಾಸವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡೊ ಹರಿಯಲ್ಲಿ, ಶಂಭೋ || ಪಲ್ಲವಿ|| ಅಹೋರಾತ್ರಿಯಲ್ಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿ ಭೂಷಣನೆ ಎನ್ನ ಅವಗುಣಗಳೆಣಿಸದಲೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಎಂಥಾ ಚೆಲುವಗೆ ಮಗಳನು ಕೊಟ್ಟನು

ಎಂಥಾ ಚೆಲುವಗೆ ಮಗಳನು ಕೊಟ್ಟನು ಗಿರಿರಾಜನು ನೋಡಮ್ಮಮ್ಮ || ಪಲ್ಲವಿ || ಕಂತುಹರ ಶಿವ ಚೆಲುವನೆನ್ನುತ ಮೆಚ್ಚಿದನು ನೋಡಮ್ಮಮ್ಮಾ || ಅನು ಪಲ್ಲವಿ || ಮೋರೆ ಐದು ಮೂರು ಕಣ್ಣು ವಿಪರೀತವ ನೋಡಮ್ಮಮ್ಮಾ ಕೊರಳೊಳು ರುಂಡಮಾಲೆಯ ಧರಿಸಿದ ಉರಗಭೂಷಣನ ನೋಡಮ್ಮಮ್ಮಾ || ೧ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಶಿವದರುಶನ ನಮಗಾಯಿತು

ರಾಗ: ಮಧ್ಯಮಾವತಿ/ಆದಿ ತಾಳ ಶಿವದರುಶನ ನಮಗಾಯಿತು ಕೇಳಿ ಶಿವರಾತ್ರಿಯ ಜಾಗರಣೆ || ಪಲ್ಲವಿ || ಪಾತಾಳಗಂಗೆಯ ಸ್ನಾನವ ಮಾಡಲು ಪಾತಕವೆಲ್ಲ ಪರಿಹಾರವು ಜ್ಯೋತಿರ್ಲಿಂಗನ ಧ್ಯಾನವ ಮಾಡಲು ದ್ಯೂತಗಳಿಲ್ಲ ಅನುದಿನವು || ೧ || ಬೇಡಿದ ವರಗಳ ಕೊಡುವನು ತಾಯಿ ಬ್ರಹ್ಮನ ರಾಣಿಯ ನೋಡುವನು
ದಾಸ ಸಾಹಿತ್ಯ ಪ್ರಕಾರ
ಬರೆದವರು