ಕನಕದಾಸ

ನಾನು ನೀನು ಎನ್ನದಿರೊ ಹೀನ ಮಾನವ

( ಭೈರವಿ ರಾಗ ಮಟ್ಟತಾಳ) ನಾನು ನೀನು ಎನ್ನದಿರೊ ಹೀನ ಮಾನವ ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಪ್ರಾಣಿ ||ಪ|| ಹೆಣ್ಣು ಹೊನ್ನು ಮಣ್ಣು ಮೂರು ನಿನ್ನದೇನೆಲೊ ಅನ್ನದಿಂದ ಬಂದ ಕಾಮ ನಿನ್ನದೇನೆಲೊ ಕರ್ಣದಿಂದ ಬರುವ ಘೋಷ ನಿನ್ನದೇನೆಲೊ ನಿನ್ನ ಬಿಟ್ಟು ಹೋಹ ಜೀವ ನಿನ್ನದೇನೆಲೊ ||೧|| ಹಲವು ಜನ್ಮದಲಿ ಬಂದಿರ್ವನು ನೀನೆಲೋ ಮಲದ ಗರ್ಭದಲಿ ನಿಂದಿರುವನು ನೀನೆಲೋ ಜಲದ ದಾರಿಯಲ್ಲಿ ಬಂದಿರುವನು ನೀನೆಲೋ ಕುಲವು ಜಾತಿ ಗೋತ್ರಗಳುಳ್ಳವನು ನೀನೆಲೋ ||೨|| ಕಾಲ ಕರ್ಮ ಶೀಲ ನೇಮ ನಿನ್ನದೇನೆಲೋ ಜಲ ವಿದ್ಯೆ ಬಯಲ ಮಾಯೆ ನಿನ್ನದೇನೆಲೋ ಕೀಲು ಜಡಿದ ನರದ ಬೊಂಬೆ ನಿನ್ನದೇನೆಲೋ ಲೋಲ ಆದಿಕೇಶವನ್ನ ಭಕ್ತನಾಗೆಲೋ ಪ್ರಾಣೀ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮೆರೆಯದಿರು ಮೆರೆಯದಿರು ಎಲೆ ಮಾನವ

( ರಾಗ ಮುಖಾರಿ ಝಂಪೆತಾಳ ) ಮೆರೆಯದಿರು ಮೆರೆಯದಿರು ಎಲೆ ಮಾನವ , ನಿನ್ನ ಸಿರಿಯ ಹವಣೇನು ಹೇಳೆಲೋ ಮಾನವಾ ||ಪ|| ಸಿರಿಯೊಳತಿ ಮಾಧವನೋ ಹಿರಿಯರೊಳು ರೋಮಶನು ದುರುಳ ರಾವಣನ ಸಂಪದವೊ ನಿನಗೆ ದುರಿಯೋಧನನವೊಲು ಮಕುಟವರ್ಧನನೋ, ನಿನ್ನ ಸಿರಿಯ ಹವಣೇನು ಹೇಳೆಲೋ ಮಾನವಾ ||೧|| ಬಲುಹಿನಲಿ ವಾಲಿಯೊ ಚೆಲುವಿಕೆಗೆ ಕಾಮನೊ ಸಲುಗೆಯಲಿ ನಾರದನೊ ಹೇಳು ನೀನು ಕಲಿಗಳೊಳು ಭೀಷ್ಮ ದ್ರೋಣಾಚಾರ್ಯ ಫಲುಗುಣನೊ ಕುಲದೊಳು ವಶಿಷ್ಠನೊ ಹೇಳೆಲೊ ಮಾನವ ||೨|| ತ್ಯಾಗದಲಿ ಕರ್ಣನೊ ಭೋಗದಲಿ ಸುರಪನೋ ಭಾಗ್ಯದಲಿ ದಶರಥನೋ ಹೇಳು ನೀನು ರಾಗದಲಿ ತುಂಬುರನೊ ಯೋಗದಲಿ ಸನಕನೋ ಹೀಗೆ ಯಾರ ಹೋಲ್ವೆ ನೀ ಹೇಳೆಲೊ ಮಾನವ ||೩|| ಯತಿಗಳೊಳು ಅಗಸ್ತ್ಯನೋ ಜೊತೆಗಳೊಳು ಹನುಮನೋ ವ್ರತಕೆ ಶುಕೇಶ್ವರನೋ ಹೇಳು ನೀನು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಅಹುದಾದರಹುದೆನ್ನಿ, ಅಲ್ಲವಾದರಲ್ಲವೆನ್ನಿ.

(ರಾಗ ಮುಖಾರಿ ಝಂಪೆತಾಳ) ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಬಹುಜನರು ನೆಲೆ ತಿಳಿದು ಪೇಳಿ ಮತ್ತಿದನು. ದೇವರಿಲ್ಲದ ಗುಡಿಯು ಪಾಳು ಬಿದ್ದಂಗಡಿಯು ಭಾವವಿಲ್ಲದ ಭಕುತಿ ಅದು ಕುಹಕ ಯುಕುತಿ ಹೇವವಿಲ್ಲದ ಹೆಣ್ಣು ಗಜ್ಜುಗ ಬೆಳೆದಾ ಕಣ್ಣು ಸೇವೆಯರಿಯದ ಧಣಿಯು ಕಲ್ಲಿನಾ ಖಣಿಯು. ಧರ್ಮವಿಲ್ಲದ ಅರಸು ಮುರಿದ ಕಾಲಿನ ಗೊರಸು ನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸು(/ಕೊಳಚೆ ಹೊಲಸು) ಕರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡು ಮರ್ಮವಿಲ್ಲದ ಮಾತು ಒಡಕು ಮಡಕೆಯ ತೂತು. ಮಕ್ಕಳಿಲ್ಲದ ಸಿರಿಯು ಕೊಳೆತ ತೆಂಗಿನ ಕಾಯಿ ಸೌಖ್ಯವಿಲ್ಲದ ಕೂ(/ಊ)ಟ ಅದು ಕಾಳಕೂಟ ಒಕ್ಕಲಿಲ್ಲದ ಊರು ಕೊಳೆತು ನಾರುವ ನೀರು ಸೊಕ್ಕಿ ನಡೆಯುವ ಭೃತ್ಯ ಅವ ಕ್ರೂರಕೃತ್ಯ ಕಂಡು ಕರೆಯದ ನೆಂಟ ಗಂಡುಗತ್ತೆಯ ಶಂಟ (/ಮೊನೆ ಕೆಟ್ಟಿಹ ಕಂಟ?)
ದಾಸ ಸಾಹಿತ್ಯ ಪ್ರಕಾರ
ಬರೆದವರು

ಏನು ಮಾಡಲಯ್ಯ ಬಯಲಾಸೆ ಬಿಡದು

(ಮುಖಾರಿ ರಾಗ , ಝಂಪೆ ತಾಳ ) ಏನು ಮಾಡಲಯ್ಯ ಬಯಲಾಸೆ ಬಿಡದು ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ||ಪ|| ಜ್ಯೋತಿಮಯವಾದ ದೀಪದ ಬೆಳಕಿಗೆ ತಾನು ಕಾತುರದಿ ಬೀಳುವಾ ಪತಂಗದಂದದಲಿ ಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವ ಧೂರ್ತೆಯರ ನೋಡುವೀ ಚಕ್ಷುವಿಂದ್ರಿಯಕೆ ||೧|| ಅಂದವಹ ಸಂಪಿಗೆಯ ಅರಳ ಪರಿಮಳ ಉಂಡು ಮುಂದುವರಿಯದೆ ಬೀಳ್ಪ ಮಧುಪನಂದದಲಿ ಸಿಂಧುರದ ಗಮನೆಯರ ಸಿರಿಮುಡಿಯೊಳಿಪ್ಪ ಹೂ- ಗಂಧ ವಾಸಿಸುವ ನಾಸಿಕದ ಇಂದ್ರಿಯಕೆ ||೨|| ಗಾಣದ ತುದಿಯೊಳಿರ್ಪ ಭೂನಾಗನಂ ಕಂಡು ಪ್ರಾಣಾಹುತಿ ಎಂದು ಸವಿವ ಮೀನಂತೆ ಏಣಾಕ್ಷಿಯರ ಚಂದುಟಿಯ ಸುಧೆಯ ಸವಿದು ತಾ ಜಾಣತನದಲಿ ನಲಿವ ಜಿಹ್ವೇಂದ್ರಿಯಕೆ ||೩|| ದಿಮ್ಮಿಡುವ ಗಣಗಣಾ ಎಂಬ ಘಂಟೆಯ ರವಕೆ ಬೆಮೆಗೊಳುತ್ತಿರುವ ಆ ಹರಿಣನಂದದಲಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಆರಿಗಾದರೂ ಪೂರ್ವ ಕರ್ಮ ಬಿಡದು

( ರಾಗ ಮುಖಾರಿ ಝಂಪೆತಾಳ) ಆರಿಗಾದರೂ ಪೂರ್ವ ಕರ್ಮ ಬಿಡದು, ಅಜ ಹರ ಸುರ ಮುನಿಗಳ ಕಾಡುತಿಹುದು ||ಪ|| ವೀರ ಭೈರವನಂತೆ ತಾನು ಬತ್ತಲೆಯಂತೆ ಮಾರಿ ಮಸಣಿಗಳಂತೆ ಕೂಳನ್ನು ತಿಂಬರಂತೆ ಸೂರ್ಯ ಚಂದ್ರಮರಂತೆ ರಾಹುವಟ್ಟುಳಿಯಂತೆ ಮೂರೆರಡು ತಲೆ ಹರಗೆ ಕೈಯೊಳು ಕರ್ಪರವಂತೆ ||೧|| ಶಿಷ್ಟ ಹರಿಶ್ಚಂದ್ರಗೆ ಮಸಣದಡಿಗೆಯು ಅಂತೆ ಸೃಷ್ಟಿಸುವ ಬೊಮ್ಮನಿಗೆ ಶಿರವು ತಾ ಹೋಯಿತಂತೆ ಅಷ್ಟ ದಿಕ್ಪಾಲಕರು ಸೆರೆಯಾಗಿರುವರಂತೆ ಕಟ್ಟುಗ್ರದಿಂದ ಇಂದ್ರನಿಗೆ ಮೈಯೆಲ್ಲ ಕಣ್ಣಂತೆ ||೨|| ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನು ರಣದೊಳಗೆ ತೊಡೆ ಮುರಿದು ಬಿದ್ದು ತಾನಿಹನಂತೆ ವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆ ವನಿತೆ ಆ ಧರ್ಮಜನ ತಾಯಿ ತಿರಿದುಂಬಳಂತೆ ||೩|| ಧರೆಗೆ ಧರ್ಮಜನಂತೆ ಕಂಕ ಭಟ್ಟನು ಅಂತೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೀನುಪೇಕ್ಷೆಯ ಮಾಡೆ ಬೇರೆ ಗತಿ ಯಾರೆನಗೆ

(ರಾಗ - ಕಲ್ಯಾಣಿ ಝಂಪೆತಾಳ) ನೀನುಪೇಕ್ಷೆಯ ಮಾಡೆ ಬೇರೆ ಗತಿ ಯಾರೆನಗೆ ನಿಗಮಗೋಚರ ಮುಕುಂದ ಗಾನರಸಲೋಲ ಆಗಮಶೀಲ ಭಕ್ತಪರಿಪಾಲ ಗೋಪಾಲ ಬಾಲಲೀಲ ||ಪ|| ಜಪತಪಾನುಷ್ಠಾನ ಜಪಿತನೆಂದೆನಿಸುವರೆ ಜಾಣತನವದರೊಳಗಿಲ್ಲ ಅಪರಿಮಿತಕರ್ಮವನು ಅನುಸರಿಸಿ ನಡೆವುದಕೆ ನಿಪುಣತ್ವ ಮೊದಲೇ ಇಲ್ಲ ಗುಪಿತದಲಿ ದಾನಧರ್ಮವ ಮಾಳ್ಪೆನೆಂದರೆ ಘನವಾದ ಧನವು ಇಲ್ಲ ಚಪಲ ನಿಪುಣತ್ವ ಜಾಣತ್ವವಿಲ್ಲದಿಹ ಸುಪವಿತ್ರ ನೀನೆ ಅಲ್ಲದಿಲ್ಲ ||೧|| ಆನೆ ಮೊಸಳೆಗೆ ಸಿಲ್ಕಿ ಅರೆಬಾಯಿ ಬಿಡುತಿರಲು ಮೌನದಲಿ ಬಂದು ಕಾಯ್ದೆ ಏ ನಾರಣ ಎಂದಡೆ ಅಜಮಿಳಗೆ ಮುಕ್ತಿಯನು ನೀನೊಲಿದು ಕರುಣಿಸಿತ್ತೆ ದಾನವೇಂದ್ರನ ಕೈಯ ಕಡುನೊಂದ ಪ್ರಹ್ಲಾದಗೆ ನೀನೊಲಿದು ಪದವನಿತ್ತೆ ದಾನವಾಂತಕ ದಿವಿಜಮುನಿವಂದಿತನೆ ನೀನು ಎನ್ನನು ಸಲಹದೇ ಬರಿದೆ ||೨||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಏನು ಇಲ್ಲದ(/ಇಲ್ಲವೋ) ಎರಡು ದಿನದ ಸಂಸಾರ

---------ರಾಗ ಮುಖಾರಿ ಮತ್ತು ರೇಗುಪ್ತಿ ಝಂಪೆತಾಳ ಏನು ಇಲ್ಲದ(/ಇಲ್ಲವೋ) ಎರಡು ದಿನದ ಸಂಸಾರ ಜ್ಞಾನದಲಿ ದಾನಧರ್ಮವ ಮಾಡಿರಯ್ಯ ||ಪ|| ಹಸಿದು ಬಂದವರಿಂಗೆ ಅಶನವೀಯಲುಬೇಕು ಶಿಶುವಿಂಗೆ ಪಾಲ್ಬೆಣ್ಣೆಯನು ನಡೆಸಬೇಕು ಹಸನಾದ ಭೂಮಿಯನು ಧಾರೆಯೆರೆಯಲುಬೇಕು ಭಾಷೆ ಕೊಟ್ಟ್ ಬಳಿಕ ನಿಜವಿರಲು ಬೇಕು ||೧|| ಕಳ್ಳತನಗಳ ಮಾಡಿ ಒಡಲು ಹೊರೆಯಲು ಬೇಡ ಠೌಳಿಗಾರನು ಆಗಿ ತಿರುಗಬೇಡ ಕುಳ್ಳಿರ್ದ ಸಭೆಯೊಳಗೆ ತಿತ್ಯವ ನಡೆಸಬೇಡ ಒಳ್ಳೆಯವನೆಂಬ ಉಬ್ಬಲು ಬೇಡ ಮನುಜ ||೨|| ದೊರೆತನವು ಬಂದಾಗ ಕೆಟ್ಟು ನುಡಿಯಲು ಬೇಡ ಸಿರಿ ಬಂದ ಕಾಲಕ್ಕೆ ಮೆರೆಯಬೇಡ ಸಿರಿವಂತನಾದರೇ ನೆಲೆಯಾದಿಕೇಶವನ ಚರಣ ಕಮಲವ ಸೇರಿ ಸುಖಿಯಾಗು ಮನುಜ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೋಡಿ ಮರುಳಾಗದಿರು ಪರಸತಿಯರ

ನೋಡಿ ಮರುಳಾಗದಿರು ಪರಸತಿಯರ || ಪಲ್ಲವಿ || ನಾಡೊಳಗೆ ಕೆಟ್ಟವರ ಪರಿಯ ನೀನರಿತು || ಅನುಪಲ್ಲವಿ || ಶತ ಮಖವನೆ ಮಾಡಿ ಸುರಸಭೆಗೈದ ನಹುಷ ತಾ ಆತುರದಿ ಶಚಿಗೆ ಮನಸೋತು ಭ್ರಮಿಸಿ ಅತಿ ಬೇಗ ಚಲಿಸಂದು ಬೆಸಸಲಾ ಮುನಿಯಿಂದ ಗತಿಗೆಟ್ಟು ಉರಗನಾಗಿದ್ದ ಪರಿಯ ನೀನರಿತು || ೧ || ಸುರಪತಿಯು ಗೌತಮನ ಸತಿಗಾಗಿ ಕಪಟದಿಂ ಧರೆಗೆ ಮಾಯವೇಷ ಧರಿಸಿ ಬಂದು ಪರಮ ಮುನಿಶಾಪದಿಂ ಅಂಗದೊಳು ಸಾ ವಿರ ಕಣ್ಣಾಗಿ ಇದ್ದ ಪರಿಯ ನೀನರಿತು || ೨ || ಸ್ಮರನ ಶರತಾಪವನು ಪರಿಹರಿಸಲರಿಯದಲೆ ದುರುಳ ಕೀಚಕನು ದ್ರೌಪದಿಯ ಕೆಣಕಿ ಮರುತಸುತ ಭೀಮನಿಂದಿರುಳೊಳಗೆ ಹತನಾದ ನರಕುರಿಯೆ ನಿನ್ನ ಪಾಡೇನು ಧರೆಯೊಳಗೆ || ೩ || ಹರನ ವರವನು ಪಡೆದು ಶರಧಿಮಧ್ಯದೊಳಿದ್ದು ದುರುಳ ದಶಶಿರನು ಜಾನಕಿಯನೊಯ್ಯೆ ಧುರದೊಳಗೆ ರಘುವರನ ಶರದಿಂದ ಈರೈದು
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ

ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ನೀ ದೇಹದೊಳಗೊ ನಿನ್ನೊಳು ದೇಹವೊ ಬಯಲು ಆಲಯದೊಳಗೊ ಆಲಯವು ಬಯಲೊಳಗೊ ಬಯಲು ಆಲಯವೆರಡು ನಯನದೊಳಗೊ ನಯನ ಬುದ್ಧಿಯೊಳಗೊ ಬುದ್ಧಿ ನಯನದೊಳಗೊ ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ || 1 || ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊ ಸವಿಯು ಸಕ್ಕರೆಗಳೆರಡು ಜಿಹ್ವೆಯೊಳಗೊ ಜಿಹ್ವೆ ಮನಸಿನೊಳಗೊ ಮನಸು ಜಿಹ್ವೆಯೊಳಗೊ ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ || 2 || ಕುಸುಮದೊಳು ಗಂಧವೊ ಗಂಧದೊಳು ಕುಸುಮವೊ ಕುಸುಮ ಗಂಧಗಳೆರಡು ಘ್ರಾಣದೊಳಗೊ ಅಸಮಭವ ಕಾಗಿನೆಲೆಯಾದಿಕೇಶವರಾಯ ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ || 3 ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ತನು ನಿನ್ನದು ಜೀವನ ನಿನ್ನದು

ತನು ನಿನ್ನದು ಜೀವನ ನಿನ್ನದು ಸ್ವಾಮಿ ಅನುದಿನದಿ ಬಾಹೊ ಸುಖ ದುಃಖ ನಿನ್ನದಯ್ಯ || ೧ || ಸವಿನುಡಿ ವೇದ ಪುರಾಣ ಶಾಸ್ತ್ರಗಳೆಲ್ಲ ಕಿವಿಗೊಟ್ಟು ಕೇಳುವ ಸ್ಥಿತಿ ನಿನ್ನದು ನವಮೋಹನಾಂಗಿಯರ ರೂಪವ ಕಣ್ಣಿಂದ ಎವೆಯಿಕ್ಕದೆ ನೋಡುವ ನೋಟ ನಿನ್ನದಯ್ಯ || ೧ || ಒಡಗೂಡಿ ಗಂಧ ಕಸ್ತೂರಿ ಪರಿಮಳವೆಲ್ಲ ಬಿಡದೆ ಲೇಪಿಸಿಕೊಂಬುವುದು ನಿನ್ನದು ಷಡುರಸದನ್ನಕ್ಕೆ ನಲಿದಾಡುವ ಜಿಹ್ವೆ ಕಡುರುಚಿಗೊಂಬುವ ಆ ಸವಿ ನಿನ್ನದಯ್ಯ || ೨ || ಮಾಯಪಾಶದ ಬಲೆಗೊಳು ಸಿಕ್ಕಿ ತೊಳಲುವ ಕಾಯ ಪಂಚೇದ್ರಿಯದ ಗತಿ ನಿನ್ನದು ಕಾಯಜಪಿತ ಕಾಗಿನೆಲೆಯಾದಿ ಕೇಶವ ರಾಯ ನೀನಲ್ಲದೆ ನರರು ಸ್ವತಂತ್ರರೇ || ೩ ||
ದಾಸ ಸಾಹಿತ್ಯ ಪ್ರಕಾರ
ಬರೆದವರು