Skip to main content

ಶ್ರೀಪಾದರಾಯ

ಅಕ್ಕೋ ರಂಗ ನೋಡೆ ಇಕ್ಕೋ ಕೃಷ್ಣ ನೋಡೆ

ಅಕ್ಕೋ ರಂಗ ನೋಡೆ ಇಕ್ಕೋ ಕೃಷ್ಣ ನೋಡೆ
ತಕ್ಕಥೈ ಎಂದೀಗೆ ಸಿಕ್ಕಿದ ನಮ್ಮ ಕೈಗೆ ||ಪ||

ಕುರುಳು ಕುಂತಳದಿಂದ ಕಸ್ತುರಿ ತಿಲಕ ಚಂದ
ಪರಮ ಪುರುಷ ಬಂದ ನೀಲ ವರ್ಣ ನಂದ ||೧||

ಮುಗುಳು ನಗೆಯ ಕಾಂತಿ ಚಂದ್ರನುದಯ ಭ್ರಾಂತಿ
ಸೊಗಸು ನೋಡಲೆ ಕಾಂತೆ ಸೆಳೆವ ಮನವ ಶಾಂತೆ ||೨||

ಬಾರೋ ಬಾ ಗೋಪಾಲಕೃಷ್ಣವಿಠಲ ಜಾಲ
ತೋರುವ ನೋಡೆ ಸೇರೋಣ ಬಾ ಸುಶೀಲೆ ||೩||

--ಅಂಬಾಬಾಯಿ

ದಾಸ ಸಾಹಿತ್ಯ ಪ್ರಕಾರ: 
ಬರೆದವರು: 

ಅನಂತ ಕಾಲದಲ್ಲಿ ಯಾವ ಪುಣ್ಯದಲ್ಲಿ

ಅನಂತ ಕಾಲದಲ್ಲಿ ಯಾವ ಪುಣ್ಯದಲ್ಲಿ
ಎನ್ನಮನ ನಿನ್ನಲ್ಲಿ ಎರಗಿಸೋ
ಎನ್ನ ಮನ ನಿನ್ನ ಚರಣದೊಳೊಮ್ಮೆ ಇಟ್ಟು
ಸಲಹು ರಂಗವಿಠಲ

ದಾಸ ಸಾಹಿತ್ಯ ಪ್ರಕಾರ: 
ಬರೆದವರು: 

ಆಡಲು ಪೋಗೊಣು ಬಾರೊ ರಂಗ

ಆಡಲು ಪೋಗೊಣು ಬಾರೊ ರಂಗ
ಕೂಡಿ ಯಮುನಾ ತೀರದಲ್ಲಿ ||ಪ||

ಚಿಣ್ಣಿಕೋಲು ಚೆಂಡು ಬುಗರಿ
ಸಣ್ಣ ಸಣ್ಣ ಆಟಗಳನು
ಕಣ್ಣಮುಚ್ಚಲಿಕೆ ಕುಂಟಲಿಪಿ
ಬಣ್ಣ ಬಣ್ಣದ ಆಟಗಳನು ||೧||

ಜಾಹ್ನವಿಯ ತೀರವಂತೆ
ಜನಕರಾಜನ ಕುವರಿಯಂತೆ
ಜಾನಕಿಯ ವಿವಾಹವಂತೆ
ಜಾಣ ನೀನು ಬರಬೇಕಂತೆ ||೨||

ಪುಂಡರೀಯ ನಗರವಂತೆ
ಭೀಷ್ಮಕರಾಜನ ಕುವರಿಯಂತೆ
ಶಿಶುಪಾಲನ್ನ ಒಲ್ಲಳಂತೆ
ನಿಮಗೆ ಓಲೆ ಬರೆದಳಂತೆ||೩||

ಕೌರವರು ಪಾಂಡವರು
ಲೆತ್ತವಾಡಿ ಸೋತರಂತೆ
ರಾಜ್ಯವನ್ನು ಬಿಟ್ಟರಂತೆ
ರಂಗವಿಠಲ ಬರಬೇಕಂತೆ ||೪||

ದಾಸ ಸಾಹಿತ್ಯ ಪ್ರಕಾರ: 
ಬರೆದವರು: 

ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು

( ನಾಟಿ ರಾಗ ಖಂಡಛಾಪು ತಾಳ)

ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು ||ಪ||
ಶಿರದಲೊಪ್ಪುವ ನೀಲಕುಂತಳಕೆ ಶರಣು
ಸಿರಿ ಸಹೋದರನರ್ಧದವಳಿಗೆ ಶರಣು ||ಅ.ಪ||

ಸೊಂಪು ನೋಟದ ಚೆಲುವ ಸೋಗೆಗಣ್ಣಿಗೆ ಶರಣು
ಸಂಪಿಗೆಯ ಕುಸುಮಸಮ ನಾಸಿಕಕೆ ಶರಣು
ಗುಂಪುರತ್ನದ ಕರ್ಣಕುಂಡಲಗಳಿಗೆ ಶರಣು
ಇಂಪುದರ್ವಣನಿಭ ಕಪೋಲಗಳಿಗೆ ಶರಣು ||೧||

ಕುಂದಕುಟ್ಮಲ ಪೋಲ್ವ ದಂತಪಕ್ತಿಗೆ ಶರಣು
ಅಂದವಾಗಿರುವ ಬಿಂಬೋಷ್ಠಕೆ ಶರಣು
ಚಂದ್ರಿಕಾನಿಭ ಮುದ್ದು ಮಂದಹಾಸಕೆ ಶರಣು
ನಂದಗೋಪನ ಮುದ್ದು ಕಂದನಿಗೆ ಶರಣು ||೨||

ಅಬ್ಜನಾಭನ ದಿವ್ಯ ಕಂಬು ಕಂಠಕೆ ಶರಣು
ಅಬ್ಜಮುಖಿಯಿರುವ ವಕ್ಷಸ್ಥಳಕೆ ಶರಣು
ಕುಬ್ಜೆಯ ಡೊಂಕ ತಿದ್ದಿದ ಭುಜಗಳಿಗೆ ಶರಣು
ಅಬ್ಜಜಾಸನನ ಪೆತ್ತ ನಾಭಿಗೆ ಶರಣು ||೩||

ರನ್ನಗಂಟೆಗಳಿರುವ ನಿನ್ನ ಕಟಿಗೆ ಶರಣು

ದಾಸ ಸಾಹಿತ್ಯ ಪ್ರಕಾರ: 
ಬರೆದವರು: 

Pages