ಈಸಬೇಕು ಇದ್ದು ಜೈಸಬೇಕು

ಈಸಬೇಕು ಇದ್ದು ಜೈಸಬೇಕು

ಈಸಬೇಕು-ಇದ್ದು ಜೈಸಬೇಕು| ಹೇಸಿಕೆ ಸಂಸಾರದಲ್ಲಿ ಲೇಶ ಆಸೆ ಇಡದ ಹಾಗೆ ||ಪ|| ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು ಸ್ವಾಮಿ ರಾಮನೆನುತ ಪಾಡಿ ಕಾಮಿತವ ಕೈಕೊಂಬರೆಲ್ಲ ||೧|| ಗೇರುಹಣ್ಣಿನಲಿ ಬೀಜ ಸೇರಿದಂತೆ ಸಂಸಾರದಿ| ಮೀರಿ ಆಶೆ ಮಾಡದ ಹಾಗೆ ಧೀರ ಕೃಷ್ಣನ ನೆನೆಯುವರೆಲ್ಲ ||೨|| ಮಾಂಸದಾಶೆಗೆ ಮತ್ಸ್ಯವು ಸಿಲುಕಿ ಹಿಂಸೆಪಟ್ಟ ಪರಿಯೊಳು | ಮೋಸ ಹೋಗದೆ ಪುರಂದರವಿಠಲ ಜಗದೀಶನೆನುತ ಕೊಂಡಾಡುವರೆಲ್ಲ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು