ಆವ ರೋಗವೊ ಎನಗೆ..
ಆವ ರೋಗವೊ ಎನಗೆ ದೇವ ಧನ್ವಂತ್ರಿ |ಪ|
ಸಾವಧಾನದಿ ಎನ್ನ ಕೈ ಪಿಡಿದು ನೋಡಯ್ಯ |ಅ ಪ|
ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆ
ಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆ
ಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆ
ಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ
ಹರಿ ಪಾದ ಸೇವೆಗೆನ್ನ ಹಸ್ತಗಳು ಚಲಿಸವು
ಗುರುಹಿರಿಯರಂಘ್ರಿಗೆ ಶಿರ ಬಾಗದು
ಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವು
ಹರಿ ಯಾತ್ರೆಗಳಿಗೆನ್ನ ಕಾಲೇಳದಯ್ಯ
ಅನಾಥಬಂಧು ಗೋಪಾಲವಿಠಲರೇಯ
ಎನ್ನ ಭಾಗ್ಯದ ವೈದ್ಯ ನೀನೆ ಆದಿ
ಅನಾದಿ ಕಾಲದ ಭವರೋಗ ಕಳೆಯಯ್ಯ
ನಾನೆಂದಿಗೂ ಮರೆಯೆ ನೀ ಮಾಡಿದುಪಕಾರ
Forums
- Log in to post comments