ನಮ್ಮಮ್ಮ ಶಾರದೆ

ನಮ್ಮಮ್ಮ ಶಾರದೆ

ರಾಗ : ಮೋಹನ ತಾಳ : ಅಟ ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ || ಪಲ್ಲವಿ || ಕಮ್ಮ ಗೋಲನ ವೈರಿಸುತನಾದ ಸೊಂಡಿಲ ಹೆಮ್ಮಯ್ಯ ಗಣನಾಥನೆ || ಅನುಪಲ್ಲವಿ || ಮೋರೆಕಪ್ಪಿನ ಭಾವ ಮೊರದಗಲ ಕಿವಿ ಕೋರೆದಾಡಿಯವನ್ಯಾರಮ್ಮ ಮೂರು ಕಣ್ಣಿನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೆ ಅಮ್ಮಯ್ಯ || ೧ || ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ ದಿಟ್ಟ ತಾನಿವನ್ಯಾರಮ್ಮ ಶಿವನ ಪಟ್ಟದ ರಾಣಿ ಪಾರ್ವತಿಯ ಕುಮಾರ ಹೊಟ್ಟೆಯ ಗಣನಾಥನೆ ಅಮ್ಮಯ್ಯ || ೨ || ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನ್ಯಾರಮ್ಮ ಲೇಸಾಗಿ ಸುಜನರ ಸಲಹುವ ನೆಲೆಯಾದಿ ಕೇಶವನ ದಾಸ ಕಾಣೆ ಅಮ್ಮಯ್ಯ || ೩ ||