ಅಂಬೆಗಾಲಿಕ್ಕುತಲಿ ಬಂದ ಗೋವಿಂದ
ಪಲ್ಲವಿ:
ಅಂಬೆಗಾಲಿಕ್ಕುತಲಿ ಬಂದ ಗೋವಿಂದ ಅನುಪಲ್ಲವಿ :
ಅಂಬುಜನಾಭ ದಯದಿಂದ ಎನ್ನ ಮನೆಗೆ
ಚರಣಗಳು:
ಜಲಚರ ಜಲವಾಸ ಧರಣಿಧರ ಮೃಗರೂಪ ನೆಲನಳೆದು ಮೂರಡಿ ಮಾಡಿಬಂದ
ಕುಲನಾಶ ವನವಾಸ ನವನೀತಚೋರನಿವ ಲಲನೆಯರ ವ್ರತಭಂಗ ವಾಹನ ತುರಂಗ || 1||
ಕಣ್ಣ ಬಿಡುವನು ತನ್ನ ಬೆನ್ನ ತಗ್ಗಿಸುವನು ಮಣ್ಣು ಕೆದರಿ ಕೋರೆ ಬಾಯ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣನಣ್ಣ ಬೆಣ್ಣೆಯ ಕಳ್ಳ ಮನೆಯ ಬಿಟ್ಟು ಕುದುರೆಯನೇರಿದ || 2||
ನೀರ ಪೊಕ್ಕನು ಗಿರಿಯ ನೆಗಹಿ ಧರಣಿಯ ತಂದು ನರಮೃಗ ಬಲಿಬಂಧ ಕೊರಳುಗೊಯಿಕ
ಶೂರ ಮುರಿದೊರಳೆಳೆದು ನಿರವಾಣಿ ಹಯಹತ್ತಿ ಪುರಂದರ ವಿಟ್ಠಲ ಮನೆಗೆ ತಾ ಬಂದ ಚರಣ || 3 ||
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Log in to post comments