ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ

ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ

( ರಾಗ ಪೀಲೂ ಅಟತಾಳ) ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ ಕಪಟ ನಾಟಕ ಸೂತ್ರಧಾರಿ ನೀನೇ ||ಪ|| ನೀನೇ ಆಡಿಸದಿರಲು ಜಡ ಒನಕೆಯ ಬೊಂಬೆ ಏನು ಮಾಡಲು ಬಲ್ಲುದು ತಾನೆ ಬೇರೆ ನೀನಿಟ್ಟ ಸೂತ್ರದಿಂ ಚಲಿಪವು ಕೈಕಾಲುಗಳು ನೀನೇ ಮುಗ್ಗಿಸಲು ಮುಗ್ಗುವ ದೇಹದವನು || ಒಂದೆಂಟು ಬಾಗಿಲ ಪಟ್ಟಣಕ್ಕೆ ತನ್ನ- ದೆಂದು ಇಪ್ಪತ್ತಾರು ಮನೆಯಾಳ್ಗಳ ತಂದು ಕಾವಲ ನಿಲಿಸಿ ಎನ್ನ ನೀ ಒಳಗಿಟ್ಟ ಮುಂದೆ ಭವದಲಿ ಭವಣಿಪುದನ್ಯಾಯ || ಯಂತ್ರ ವಾಹಕ ನೀನೇ ಒಳಗಿದ್ದು ಎನ್ನ ಸ್ವ- ತಂತ್ರನೆಂದೆನಿಸಿ ಕೊಲಿಸುವರೆ ಹೇಳೊ ಕಂತು ಪಿತ ಲಕ್ಷ್ಮೀಶ ಎಂತಾದಡಂತಹುದಾ- ನಂತ ಮೂರುತಿ ನಮ್ಮ ಪುರಂದರ ವಿಠಲ||
ದಾಸ ಸಾಹಿತ್ಯ ಪ್ರಕಾರ
ಬರೆದವರು