ಆಚಾರವಿಲ್ಲದ ನಾಲಿಗೆ
ಪಲ್ಲವಿ:
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ
ಅನುಪಲ್ಲವಿ:
ವಿಚಾರವಿಲ್ಲದೆ ಪರರ ದೂಷಿಪುದಕ್ಕೆ ಚಾಚಿಕೊಂಡಿರುವಂಥ ನಾಲಿಗೆ
ಚರಣ:
ಪ್ರಾತಃಕಾಲದೊಳೆದ್ದು ನಾಲಿಗೆ ಸಿರಿಪತಿಯೆನ್ನ ಬಾರದೆ ನಾಲಿಗೆ
ಪತಿತ ಪಾವನ ನಮ್ಮ ರಜಪತಿ ಜನಕನ ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ ನಿನ್ನ ಬೇಡಿಕೊಂಬುವೆನು ನಾಲಿಗೆ
ರೂಢಿಗೊಡೆಯ ಶ್ರೀ ರಾಮನ ನಾಮವ ಪಾಡುತಲಿರು ಕಂಡ್ಯ ನಾಲಿಗೆ
ಹರಿಯ ಸ್ಮರಣೆ ಮಾಡು ನಾಲಿಗೆ ನರಹರಿಯ ಭಜಿಸು ಕಂಡ್ಯ ನಾಲಿಗೆ
ವರದ ಪುರಂದರ ವಿಟ್ಠಲ ರಾಯನ ಚರಣ ಕಮಲ ನೆನೆ ನಾಲಿಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments