ಇಂದು ನಿನ್ನ ಮರೆಯ ಹೊಕ್ಕೆ

ಇಂದು ನಿನ್ನ ಮರೆಯ ಹೊಕ್ಕೆ

(ರಾಗ ಖರಹರ ಮಟ್ಟೆತಾಳ ) ಇಂದು ನಿನ್ನ ಮರೆಯ ಹೊಕ್ಕೆ ವೆಂಕಟೇಶನೆ ಎಂದಿಗಾದರೆನ್ನ ಕಾಯೊ ಶ್ರೀನಿವಾಸನೆ || ಶೇಷಗಿರಿಯವಾಸ ಶ್ರೀಶ ದೋಷರಹಿತನೆ ಏಸು ದಿನಕು ನಿನ್ನ ಪಾದದಾಸನು ನಾನೆ ಕ್ಲೇಶಗೈಸದಿರು ಎನ್ನ ಸ್ವಾಮಿಯು ನೀನೆ || ಕಮಲನಯನ ಕಾಮಜನಕ ಕರುಣವಾರಿಧೇ ರಮೆಯನಾಳ್ವ ಕಮಲನಾಭ ಹೇ ದಯಾನಿಧೇ ಯಮನ ಪುರದಿ ಶಿಕ್ಷಿಸದಿರು ಪಾರ್ಥಸಾರಥೇ || ಉರಗಶಯನ ಸುರರಿಗೊಡೆಯ ಸಿರಿಯರಮಣನೆ ಶರಣಪಾಲ ಬಿರುದು ತೋರಿ ಪೊರೆವ ದೇವನೆ ಕರುಣಿಸೆನಗೆ ಮುಕುತಿಯ ಪುರಂದರವಿಠಲನೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು