ಈ ಪರಿಯ ಸೊಬಗು ಇನ್ನಾವ ದೇವರಲಿ ಕಾಣೆ

ಈ ಪರಿಯ ಸೊಬಗು ಇನ್ನಾವ ದೇವರಲಿ ಕಾಣೆ

(ರಾಗ ಕಾಂಭೋಜ ಝಂಪೆತಾಳ ) ಈ ಪರಿಯ ಸೊಬಗು ಇನ್ನಾವ ದೇವರಲಿ ಕಾಣೆ ||ಪ|| ಗೋಪೀಜನಪ್ರೀಯ ಗೋಪಾಲಗಲ್ಲದೆ ||ಅ|| ದೊರೆಯತನದಲಿ ನೋಡೆ ಧರಣಿದೇವಿಗೆ ರಮಣ ಸಿರಿಯತನದಲಿ ನೋಡೆ ಶ್ರೀಕಾಂತನು ಹಿರಿಯತನದಲಿ ನೋಡೆ ಸರಸಿಜೋದ್ಭವನಯ್ಯ ಗುರುವುತನದಲಿ ನೋಡೆ ಜಗದಾದಿ ಗುರುವು || ಪಾವನತ್ವದಿ ನೋಡೆ ಅಮರಗಂಗಾಜನಕ ದೇವತ್ವದಲಿ ನೋಡೆ ದಿವಿಜರೊಡೆಯ ಲಾವಣ್ಯದಲಿ ನೋಡೆ ಲೋಕಮೋಹಕನಯ್ಯ ಆವ ಧೈರ್ಯದಿ ನೋಡೆ ಅಸುರಾಂತಕ || ಗಗನದಲಿ ಸಂಚರಿಪ ಗರುಡದೇವನೆ ತುರಗ ಜಗತೀಧರ ಶೇಷ ಪರಿಯಂಕಸಯನ ನಿಗಮಗೋಚರ ಪುರಂದರವಿಠಲಗಲ್ಲದೆ ಮಿಗಿಲಾದ ದೈವಗಳಿಗೀ ಭಾಗ್ಯವುಂಟೇ ||
ದಾಸ ಸಾಹಿತ್ಯ ಪ್ರಕಾರ
ಬರೆದವರು