ಎಲ್ಯಾಡಿ ಬಂದ್ಯೊ ಎನ್ನ ರಂಗಯ್ಯಾ ನೀ

ಎಲ್ಯಾಡಿ ಬಂದ್ಯೊ ಎನ್ನ ರಂಗಯ್ಯಾ ನೀ

ರಾಗ: ಶಂಕರಾಭರಣ ತಾಳ: ತ್ರಿಪುಟ ಎಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀ ಎಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ||ಪ|| ಆಲಯದೊಳಗೆ ನೀನಾಡದೆ ಚಿನಿ ಪಾಲು ಸಕ್ಕರೆ ನೀನೊಲ್ಲದೆ ಚಿಕ್ಕ ಬಾಲರೊಡನೆ ಕೂಡ್ಯಾಡದೆ ಮುದ್ದು ಬಾಲಯ್ಯ ನೀ ಎನ್ನ ಕಣ್ಣ ಮುಂದಾಡದೆ ||೧|| ಬಟ್ಟ ಮುತ್ತಿನ ಬೊಗಸೆ ಕಂಗಳು ಪಣೆಯೊ ಳಿಟ್ಟ ಕಸ್ತೂರಿ ತಿಲಕದಂದವು ದಿಟ್ಟತನದಿ ಕೂಡ್ಯಾಡಲು ಪುಟ್ಟ ಕೃಷ್ಣಯ್ಯ ನೀ ಎನ್ನ ಕಣ್ಣ ಮುಂದಾಡದೆ ||೨|| ಅಷ್ಟ ದಿಕ್ಕಿಲಿ ಅರಸಿ ಕಾಣದೆ ಬಹಳ ದೃಷ್ಟಿಗೆಟ್ಟೆನು ನಿನ್ನ ನೋಡದೆ ಇ ನ್ನೆಷ್ಟು ಹೇಳಲಿ ಕೇಳಬಾರದೆ ರಂಗ ವಿಠಲ ನೀ ಎನ್ನ ಕಣ್ಣ ಮುಂದಾಡದೆ ||೩|| (ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಅವರ ಶ್ರೀಪಾದರಾಜ ಸಂಪುಟದಿಂದ)
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ