ಎಳ್ಳುಕಾಳಿನಷ್ಟು ಭಕುತಿ

ಎಳ್ಳುಕಾಳಿನಷ್ಟು ಭಕುತಿ

( ರಾಗ ತೋಡಿ. ರೂಪಕ ತಾಳ) ಎಳ್ಳುಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯ ಬೆಳ್ಳಕ್ಕಿಯಂತೆ ನಿನ್ನ ಧ್ಯಾನ ಮಾಡುವೆನಯ್ಯ ||ಪ|| ಗಂಡುಮುಳುಗ ಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿ ಮಂಡೆಶೂಲೆಯಲ್ಲದೆ ಗತಿಯು ಇಲ್ಲ ಮಂಡೂಕನಂದದಿ ಕೆರೆಯ ದಂಡೆಯ ಮೇಲೆ ಕುಳಿತುಕೊಂಡು ಮಂಡೇಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ || ಗಾಣದೆತ್ತಿನಂತೆ ಕಣ್ಣ ಕಟ್ಟಿ ಪ್ರದಕ್ಷಿಣೆ ಮಾಡಿ ಕಾಣದೆ ನಾ ತಿರುಗಿದೆ ಕಂಡುದುದಿಲ್ಲ ಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿ ಆಣಿಕಾರಿಕೆ ಮಾಡಿದಂಥ ಈ ಕುಯುಕುತಿ || ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆ ಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲ ಪೊಕ್ಕಳುಪೂವಿನ ಶ್ರೀ ಪುರಂದರವಿಠಲನೆ ಮಕ್ಕಳಾಟಿಕೆಯ ಬಿಡೋ ರಕ್ಷಿಸೊ ಎನ್ನೊಡೆಯ ||
ದಾಸ ಸಾಹಿತ್ಯ ಪ್ರಕಾರ
ಬರೆದವರು