ಕನಕದಾಸನ ಮೇಲೆ ದಯ ಮಾಡಲು ವ್ಯಾಸ

ಕನಕದಾಸನ ಮೇಲೆ ದಯ ಮಾಡಲು ವ್ಯಾಸ

ರಾಗ: ಕಾಂಭೋಜಿ. ರೂಪಕ ತಾಳ ಪಲ್ಲವಿ: ಕನಕದಾಸನ ಮೇಲೆ ದಯೆ ಮಾಡಲು ವ್ಯಾಸಮುನಿ ಮಠದವರೆಲ್ಲ ದೂರಿಕೊಂಬುವರೊ || ಚರಣಗಳು: 1: ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲು ಧೂರ್ತರಾಗಿದ್ದ ವಿದ್ವಾಂಸರೆಲ್ಲ ಸಾರ್ಥಕವಾ ಇದು ಇವರ ಸನ್ಯಾಸಿತನವೆಲ್ಲ ಪೂರ್ತ್ಯಾಗಲೆಂದೆನಲು ಯತಿಯು ನಗುತ್ತಿದ್ದನು 2: ಮರುದಿನ ಅವರವರ ಪರೀಕ್ಷಿಸಬೇಕೆಂದು ಕರೆದು ವಿದ್ವಾಂಸರ ಕನಕ ಸಹಿತ ಕರದಲ್ಲಿ ಕದಳಿಯ ಫಲಗಳನೆ ಕೊಟ್ಟು ಯಾರಿರದ ಸ್ಥಳದಲಿ ಮೆದ್ದು ಬನ್ನಿರೆನಲು 3: ಊರ ಹೊರಗೆ ಹೋಗಿ ಬೇರೆ ಬೇರೆ ಕುಳಿತು ತೋರದಲೆ ಎಲ್ಲರು ಮೆದ್ದು ಬರಲು ತೋರಲಿಲ್ಲವು ಎನಗೆ ಏಕಾಂತ ಸ್ಥಳವೆನುತ ಸಾರಿ ಕದಳೀಫಲವ ತಂದು ಮುಂದಿಟ್ಟ 4: ಡಿಂಭದೊಳು ಶಬ್ದ ವಾಗಾದಿ ಶ್ರೋತ್ರಗಳಲ್ಲಿ ಇಂಬಾಗಿ ತತ್ವೇಶರೆಲ್ಲ ತುಂಬಿಹರೊ ತಿಂಬುವುದು ಹೇಗೆನುತ ವ್ಯಾಸರಾಯರ ಕೇಳೆ ಸಂಭ್ರಮದಲವರೆಲ್ಲ ಕುಳಿತು ಕೇಳಿದರು 5: ಮಾಣಿಕವು ಕೋಡಗನ ಕೈಯಲ್ಲಿ ಇದ್ದಂತೆ ಕೋಣನಿದಿರಿಗೆ ಕಿನ್ನರಿಯ ಮೀಟಿದಂತೆ ವೇಣು ಧ್ವನಿ ಬಧಿರನ ಬಳಿ ಮಾಡಿದಂತೆ ಕಣ್ಣು ಕಾಣದವನಿಗೆ ಕನ್ನಡಿಯ ತೋರಿದಂತೆ 6: ನೋಡಿದಿರ ಈ ಕನಕನಾಡುವಾ ಮಾತುಗಳ ಮೂಢ ಜನರರಿಯಬಲ್ಲಿರ ಮಹಿಮೆಯ ನಾಡಾಡಿಯಂತೆಯೇ ಮಾಡಿ ಬಿಟ್ಟರು ಇವಗೆ ನಾಡೆಲ್ಲ ಹುಡುಕಿದರು ಈಡಾರ ಕಾಣೆ 7: ಕರದಲ್ಲಿ ಮೂರ್ತಿಯನು ಪಿಡಿದು ಕೇಳುತಿರಲು ಅರಿಯದ ಜ್ಞಾನದಲಿ ಪೇಳುತಿರಲು ದ್ವಾರದಿ ಕನಕನು ಬಂದು ವಾಸುದೇವನ ರೂಪ ಪರಬೊಮ್ಮ ಪುರಂದರ ವಿಟ್ಠಲನೆಂದು ಪೇಳಿದನು
ದಾಸ ಸಾಹಿತ್ಯ ಪ್ರಕಾರ
ಬರೆದವರು