ಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ

ಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ

ರಾಗ: ಮೋಹನ ತಾಳ: ಅಟ ಕಷ್ಟಪಟ್ಟರು ಇಲ್ಲ ಕಳವಳಿಸಿದರಿಲ್ಲ ಭೃಷ್ಟಮಾನವ ನಿನ್ನ ಹಣೆಯ ಬರಹವಲ್ಲದೆ ಇಲ್ಲ || ಸಿರಿವಂತರ ಸ್ನೇಹಮಾಡಿ ನಡೆದರಿಲ್ಲ ಪರಿಪರಿಯಲ್ಲಿ ವಿದ್ಯೆ ಕಲಿತರಿಲ್ಲ ನರಿಯ ಬುದ್ಧಿಯಲ್ಲಿ ನಡೆದುಕೊಂಡರು ಇಲ್ಲ ಅರಿಯದೆ ಹಲವ ಹಂಬಲಿಸಿದರಿಲ್ಲ || ಕೊಂಡಾಡಿ ಕಾಡಿ ನೀ ಬೇಡಿಕೊಂಡರು ಇಲ್ಲ ಕಂಡಕಂಡವರಿಗೆ ಕೈಮುಗಿದರಿಲ್ಲ ಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲ ಪ್ರ- ಚಂಡನಾದರೂ ಇಲ್ಲ ಪರಿಹಾಸವೆಲ್ಲ || ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲ ಬೆಟ್ಟಗಳನು ಕಿತ್ತಿಟ್ಟರಿಲ್ಲ ಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯ ಕೊಟ್ಟವರಿಗೆ ಉಂಟು ಕೊಡದವರಿಗೆ ಇಲ್ಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು