ಕಾಗದ ಬಂದಿದೆ ನಮ್ಮ ಕಮಲನಾಭನದು

ಕಾಗದ ಬಂದಿದೆ ನಮ್ಮ ಕಮಲನಾಭನದು

(ರಾಗ ( ಮುಸಲ್ಮಾನಿ ) ಗಮನಶ್ರಮ ಏಕತಾಳ) ಕಾಗದ ಬಂದಿದೆ ನಮ್ಮ ಕಮಲನಾಭನದು, ಈ ಕಾಗದವನ್ನು ಓದಿಕೊಂಡು ಕಾಲವ ಕಳೆಯಿರೊ ||ಪ|| ಕಾಮಕ್ರೋಧವ ಬಿಡಿರೆಂಬೊ ಕಾಗದ ಬಂದಿದೆ ನೇಮನಿಷ್ಠೆಯೊಳಿರೆಂಬೊ ಕಾಗದ ಬಂದಿದೆ ತಾಮಸ ಜನರನ್ನು ಕೂಡದಿರೆಂಬೋ ಕಾಗದ ಬಂದಿದೆ , ನಮ್ಮ ಕಾಮನಯ್ಯನು ತಾನೆ ಬರೆದ ಕಾಗದ ಬಂದಿದೆ || ಹೆಣ್ಣಿನಾಸೆ ಬಿಡಿರೆಂಬೊ ಕಾಗದ ಬಂದಿದೆ ಹೊನ್ನಿನಾಸೆ ಬಿಡಿರೆಂಬೊ ಕಾಗದ ಬಂದಿದೆ ಮಣ್ಣಿನಾಸೆ ಬಿಡಿರೆಂಬೊ ಕಾಗದ ಬಂದಿದೆ , ನಮ್ಮ ಕಮಲನಾಭನು ತಾನೆ ಬರೆದ ಕಾಗದ ಬಂದಿದೆ || ಗೆಜ್ಜೆ ಕಾಲ್ಕಟ್ಟಿರೆಂಬೊ ಕಾಗದ ಬಂದಿದೆ ಹೆಜ್ಜೆ ಹೆಜ್ಜೆಗೆ ಹರಿಯೆನ್ನಿರೆಂಬೊ ಕಾಗದ ಬಂದಿದೆ ಲಜ್ಜೆ ಬಿಟ್ಟು ಕುಣಿಯಿರೆಂಬೊ ಕಾಗದ ಬಂದಿದೆ , ನಮ್ಮ ಪುರಂದರವಿಟ್ಠಲ ತಾನೆ ಬರೆದ ಕಾಗದ ಬಂದಿದೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು