ಜಯದೇವ ಜಯದೇವ ಜಯಗುರು ಮೈಲಾರಿ

ಜಯದೇವ ಜಯದೇವ ಜಯಗುರು ಮೈಲಾರಿ

( ಮಾಲಕಂಸ್ ರಾಗ ಝಪ್ ತಾಳ) ಜಯದೇವ ಜಯದೇವ ಜಯಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ||ಧ್ರುವ|| ಖಡ್ಗವ ಕರದಲಿ ಪಿಡಿದು ಖಂಡಿಸಿದಜ್ಞಾನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ ||೧|| ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನ ಮಾಡುವ ಸಹಕಾರ ಸಲಹುವೆ ಭಕ್ತ ಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿ ಶೂರ ||೨|| ಮಹಿಗೆ ಪತಿ ಅಹುದು ಶ್ರೀಗುರು ಭೂಪತಿ ಬಾಹ್ಯಾಂತ್ರ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೋ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು