ತಂಗಾಳಿ ವಶವಲ್ಲವೇ

ತಂಗಾಳಿ ವಶವಲ್ಲವೇ

ತಂಗಾಳಿ ವಶವಲ್ಲವೇ ರಾಗ:ಶಂಕರಾಭರಣ ತಾಳ: ಅಟ ತಂಗಾಳಿ ವಶವಲ್ಲವೇ ||ಪ|| ಅಂಗದೊಳಗೆ ಬೆಳದಿಂಗಳು ತುಂಬಿತು ||ಅ.ಪ|| ಚಂದನದಿಂದ ಕುಚಂಗಳ ತವಿಸಲು ಇಂದುಕಿರಣ ಬಂದು ಕಂದಿಸಲು ಮಂದ ಮಾರುತದಲಿ ನಿಂದಿರಲಾರೆನೇ ಹೊಂದಿದ ತಾಪವು ಹೋಹುದೇನೆ ಹೆಣ್ಣೇ ||ಚ1|| ಬಂಗಾರವೊಡಲಿಗೆ ಭಾರವಾಗಿದೆಯೇ ಶೃಂಗರಿಸಿ ಕೊಳ ಸೇರಲಿಲ್ಲ ಅಂಗಜ ಶರತಾಪ ತಾಳಲಾರೆ ನಾನು ಉಂಗುರವು ನಿನಗೆ ಉಚಿತವೇನೇ ಹೆಣ್ಣೇ||ಚ 2|| ಮುನ್ನ ಪುರಂದರ ವಿಠಲರಾಯ ಕೂಡಿ ಇನ್ನೂ ಬಾರೆಂದರೆ ಬಾರನೇಕೆ ಅನ್ನ ಪಾನ ರುಚಿಯಾಗಿ ತೋರಲಿಲ್ಲ ನಿನ್ನಾಣೆ ಕಣ್ಣಿಗೆ ನಿದ್ರೆ ಬಾರದು ಹೆಣ್ಣೇ ||ಚ 3||
ದಾಸ ಸಾಹಿತ್ಯ ಪ್ರಕಾರ
ಬರೆದವರು