ತನ್ನ ಸ್ಮರಣೆ ತಾನರಿಯದ ಮನವು

ತನ್ನ ಸ್ಮರಣೆ ತಾನರಿಯದ ಮನವು

( ಮುಖಾರಿ ರಾಗ ಅಷ್ಟ ತಾಳ) ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ||ಪ|| ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು ||೧|| ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ಧನ್ಯವಾದವರನ್ನು ಕಂಡು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ ||೨|| ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ ||೩|| ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ ||೪|| ಮೀಸಲಿಗೊದಗುವ ಶೇಷಗಿರೀಶನ ಆಸೆಯ ಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸವಾಡುವದಿಂದು ||೫|| ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವುದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು ||೬|| ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯೆದಿ ಹಸಿಯ ಮೆಲ್ಲುವದೇಕೆ ವಿಷಮವಾಗದೆ ಹರಿ ವರಾಹ ತಿಮ್ಮಪ್ಪನ ಕುಶಲದಿ ನೆನೆಯಲು ಹಸನದಿ ಸಲಹುವ ||೭|| ( ರಚನೆ--- ನೆಕ್ಕರ ಕೃಷ್ಣದಾಸರು)
ದಾಸ ಸಾಹಿತ್ಯ ಪ್ರಕಾರ
ಬರೆದವರು