ದಯಮಾಡಿ ಸಲಹಯ್ಯ ಭಯನಿವಾರಣನೆ

ದಯಮಾಡಿ ಸಲಹಯ್ಯ ಭಯನಿವಾರಣನೆ

(ಮುಖಾರಿ ರಾಗ ಝಂಪೆತಾಳ) ದಯಮಾಡಿ ಸಲಹಯ್ಯ ಭಯನಿವಾರಣನೆ ಹಯವದನ ನಿನ್ನ ಚರಣ ನಂಬಿದೆನೊ ಜೀಯ ||ಪ|| ಕ್ಷಣ ಕ್ಷಣಕೆ ನಾ ಮಾಡಿದಂಥ ಪಾಪಂಗಳನು ಎಣಿಸಲಳವಲ್ಲ ಅಷ್ಟಿಷ್ಟು ಎಂದು ಫಣಿಶಾಯಿ ನೀನೆನ್ನ ಅವಗುಣಗಳೆನಿಸದೆ ನೆನಹಿನಾತುರ ಕೊಟ್ಟು ದಾಸನೆಂದೆನಿಸಯ್ಯ ||೧|| ಕಂಡ ಕಂಡ ಕಡೆಗೆ ಪೋಪ ಚಂಚಲ ಮನವು ಪಿಂಡ ತಿಂಬಲ್ಲಿ ಬಹು ನಿಷ್ಠ ತಾನು ಭಂಡಾಟದವನೆಂದು ಬಯಲಿಗೆ ತಾರದೆ ಕೊಂಡಾಡುವಂತೆ ಭಕುತಿಯ ಕೊಟ್ಟು ಸಲಹಯ್ಯ ||೨|| ಜಾತಿಧರ್ಮವ ಬಿಟ್ಟು ಅಜಾಮಿಳನು ಇರುತಿರಲು ಪ್ರೀತಿಯಿಂದಲಿ ಮುಕುತಿ ಕೊಡಲಿಲ್ಲವೆ ಖ್ಯಾತಿಯನು ಕೇಳಿ ನಾ ಮೊರೆಹೊಕ್ಕೆ ಸಲಹಯ್ಯ ವಾತಜನ ಪರಿಪಾಲ ಶ್ರೀರಂಗವಿಠಲ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು