ನಂಬದಿರು ಈ ದೇಹ

ನಂಬದಿರು ಈ ದೇಹ

(ರಾಗ ಮಧ್ಯಮಾವತಿ. ಝಂಪೆ ತಾಳ ) ನಂಬದಿರು ಈ ದೇಹ ನಿತ್ಯವಲ್ಲ ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೆ ಎಲುವು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ ಒಳಗೆ ಮಲಮೂತ್ರಾದಿ ಕ್ರಿಮಿಗಳಿರವು ಹಲವು ವ್ಯಾಧಿಯ ಬೀಡು ಪಂಚಭೂತದನಾಡು ಬಲುಹು ದೇಹವ ನೆಚ್ಚಿ ಕೆಡಬೇಡ ಮನುಜ ಸತಿ ಸುತರು ಹಿತರೆಂದು ಮತಿ ಮರೆದು ಮಮತೆಯಲಿ ಅತಿಕಾಂಕ್ಷೆಯಿಂದ ದುರ್ವಿಷಯ ಬಲಿದು ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ ಗತಿಶೂನ್ಯನಾಗಿ ನೀ ಕೆಡಬೇಡ ಮನುಜ ಪರರ ನಿಂದಿಸದೆ ಪರವಧುಗಳನು ಬಯಸದೆ ಗುರುವಿಪ್ರ ಸೇವೆಯನು ಮಾಡು ಬಿಡದೆ ಹರಿ ಸ್ತುತಿಯ ನೀ ಕೇಳು ಹರಿ ಕೀರ್ತನೆಯ ಮಾಡು ಸಿರಿಪುರಂದರವಿಠಲನೊಲಿದು ಪಾಲಿಸುವ
ದಾಸ ಸಾಹಿತ್ಯ ಪ್ರಕಾರ
ಬರೆದವರು