ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ
ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ |ಪ|
ರಮಾರಮಣನಲ್ಲಮಲಭಕುತಿ ಕೊಡು ನಮೋ ವಿಶಾಲಾಕ್ಷ |ಅ ಪ|
ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತರಕ್ಷ |
ಫಾಲನೇತ್ರ ಕಪಾಲ ರುಂಡಮಣಿ ಮಾಲಾ ಧೃತ ವಕ್ಷ |
ಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷ |
ಶ್ರೀಲಕುಮೀಶನ ಓಲೈಸುವ ಭಕ್ತಾವಳಿಗಳ ಪಕ್ಷ |೧|
ವಾಸವನುತ ಹರಿದಾಸ ಈಶ ಕೈಲಾಸ ವಾಸ ದೇವ |
ದಾಶರಥಿಯ ಔಪಾಸಕ ಸುಜನರ ಪೋಷಿಪ ಪ್ರಭಾವ |
ಭಾಸಿಸುತಿಹುದು ಅಶೇಷ ಜೀವರಿಗೆ ಈಶನೆಂಬ ಭಾವ |
ಶ್ರೀಶನಲ್ಲಿ ಕೀಲಿಸು ಮನವ ಗಿರಿಜೇಶ ಮಹಾದೇವ |೨|
ಮೃತ್ಯುಂಜಯ ನಿನ್ನುತ್ತಮ ಪದಯುಗ ಭೃತ್ಯನೋ ಸರ್ವತ್ರ |
ಹತ್ತಿರ ಕರೆದು ಅಪತ್ಯನಂತೆ ಪೊರೆಯುತ್ತಿರೋ ತ್ರಿನೇತ್ರ |
ತೆತ್ತಿಗನಂತೆ ಕಾಯುತ್ತಿಹೆ ಬಾಣನ ಸತ್ಯದಿ ಸುಚರಿತ್ರ |
ಕರ್ತೃ ಉಡುಪಿ ಸರ್ವೋತ್ತಮ ಕೃಷ್ಣನ ಪೌತ್ರಕೃಪಾ ಪಾತ್ರ |೩|
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments