ನರಸಿಂಹ ಮಂತ್ರವೊಂದಿರಲು
(ರಾಗ ಕಾಂಭೋಜಿ. ಝಂಪೆ ತಾಳ )
ನರಸಿಂಹ ಮಂತ್ರವೊಂದಿರಲು ಸಾಕು
ದುರಿತ ಕೋಟಿಯ ತರಿದು ಭಾಗ್ಯವನು ಕೊಡುವ
ಶಿಶುವಾದ ಪ್ರಹ್ಲಾದನ ಬಾಧೆ ಬಿಡಿಸಿದ ಮಂತ್ರ
ಅಸುರ ಕುಲದವರಿಗೆ ಶತ್ರು ಮಂತ್ರ
ವಸುಧೆಯೊಳು ಪಾದಕಿಗಳಘವ ಹೀರುವ ಮಂತ್ರ
ಪಶುಪತಿಗೆ ಪ್ರಿಯವಾದ ದಿವ್ಯ ಮಂತ್ರ
ದಿಟ್ಟ ಧ್ರುವರಾಯನಿಗೆ ಪಟ್ಟಗಟ್ಟಿದ ಮಂತ್ರ
ಶಿಷ್ಟ ವಿಭೀಷಣನ ಪೊರೆದ ಮಂತ್ರ
ಕಟ್ಟ ಕಡೆಯಲಿ ಅಜಾಮಿಳನ ಸಲಹಿದ ಮಂತ್ರ
ಮುಟ್ಟಿ ಭಜಿಸಿದವರಿಗೆ ಮೋಕ್ಷ ಮಂತ್ರ
ಹಿಂಡು ಭೂತವ ಕಡಿದು ತುಂಡು ಮಾಡುವ ಮಂತ್ರ
ಕೊಂಡಾಡೊ ಲೋಕಕೆ ಪ್ರಚಂಡ ಮಂತ್ರ
ಗಂಡುಗಲಿ ಕದನ ಉದ್ದಂಡ ವಿಕ್ರಮ ಮಂತ್ರ
ಪುಂಡರೀಕಾಕ್ಷ ಪುರಂದರವಿಠಲ ಮಂತ್ರ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments