ನೆಚ್ಚನಯ್ಯ ಹರಿ ಮೆಚ್ಚನಯ್ಯ
(ರಾಗ ಪೂರ್ವಿ ಆದಿ ತಾಳ )
ನೆಚ್ಚನಯ್ಯ ಹರಿ ಮೆಚ್ಚನಯ್ಯ ||ಪ ||
ಉತ್ತಮನೆಂದೆನಿಸಿಕೊಂಡು ಅರುಣೋದಯದ ಕಾಲದಲ್ಲಿ
ನಿತ್ಯ ಕಾಗೆಯ ಹಾಗೆ ನೀರೊಳಗೆ ಮುಳುಗುವವಗೆ ||
ತೊಗಲಿನ ದೇಹಕೆ ಗೋಪಿ ಗಂಧ ತೇದುಕೊಂಡು
ರೋಗ ಬಂದೆಮ್ಮೆಯ ಹಾಗೆ ಬರೆದುಕೊಂಬ ಮನುಜನಿಗೆ ||
ಮರುಳುತನವು ಮಾತಿನಲ್ಲಿ ಹೃದಯದಲ್ಲಿ ವಿಷದ ಗುಟಿಕೆ
ಮರದ ಮೇಲಣ ಓತಿಯಂತೆ ನಮಿಸುವಂಥ ದುರುಳನಿಗೆ ||
ಹಣವಿಗೆ ಹಾರೈಸಿಕೊಂಡು ತಿರುಪತಿಗ್ಹೋಹರ ಕಂಡು
ಹಣಕಾಸು ಕೊಂಡು ಬಂದು ಸ್ವಾಮಿಯ ನೋಡುವವಗೆ ||
ಬಾಯ ಬೀಗದಲ್ಲಿ ಹೊಯ್ದು ಹಾಲು ತುಪ್ಪಗಳನು ಸವಿದು
ಮೈಯು ಹುಳುತ ನಾಯಿಯಂತೆ ಬೀದಿ ತಿರುಗುವವಗೆ ||
ತಾನು ತನ್ನ ಮನೆಯ ಒಳಗೆ ದಾನ ಧರ್ಮಗಳನು ಕೊಡದೆ
ನೀನು ದಾನ ಮಾಡು ಎಂಡು ಅನ್ಯರಿಗೆ ಹೇಳುವವಗೆ ||
ಏಕೋ ಭಾವ ಏಕೋ ಭಕ್ತಿ ಏಕೋ ಯುಕ್ತಿ ಏಕೋ ಮುಕ್ತಿ
ಬೇಕಾದ ಪುರಂದರ ವಿಠಲನ್ನ ಭಜಿಸದೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments