ಬದುಕಿದೆನು ಬದುಕಿದೆನು
ಬದುಕಿದೆನು ಬದುಕಿದೆನು
( ರಾಗ ಕಾಂಭೋಜ. ಝಂಪೆ ತಾಳ)
ಬದುಕಿದೆನು ಬದುಕಿದೆನು ಭವವೆನಗೆ ಹಿಂಗಿತು
ಪದುಮನಾಭನ ಪಾದದೊಲುಮೆ ಎನಗಾಯಿತು ||ಪ||
ಮುಕ್ತರಾದರು ಎನ್ನ ನೂರೊಂದು ಕುಲದವರು
ಮುಕ್ತಿ ಮಾರ್ಗಕೆ ಯೋಗ್ಯ ನಾನಾದೆನು
ಮುಕ್ತಿದಾಯಕನ ಭಕ್ತಿಗೆ ಮನವು ನೆಲೆಸಿತು
ವ್ಯಕ್ತವಾಯಿತು ನಾಲಿಗೆಯೊಳು ಹರಿನಾಮ ||
ಹರಿಯ ತೀರ್ಥ ಪ್ರಸಾದವಿಂದೆನಗೆ ದೊರಕಿತು
ಹರಿಕಥಾಮೃತವೆನ್ನ ಕಿವಿಯೊಳಾಯ್ತು
ಹರಿದಾಸರು ಎನ್ನ ಬಂಧುಬಳಗಾಯಿತು
ಹರಿಮುದ್ರೆ ಎನಗಾಭರಣವಾಯಿತು ||
ಹಿಂದೆನ್ನ ಸಂತತಿಗೆ ಸಕಲ ಸಾಧನವಾಯ್ತು
ಮುಂದೆನ್ನ ಜನ್ಮವು ಸಫಲವಾಯ್ತು
ತಂದೆ ಪುರಂದರವಿಠಲನೆಂದೆಂಬ ಪರದೈವ
ಬಂದು ಹೃದಯದಲಿ ನೆಲೆಯಾಗಿ ನಿಂತ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments