ಭಾಗ್ಯದ ಲಕ್ಷ್ಮೀ ಬಾರಮ್ಮಾ
ಭಾಗ್ಯದ ಲಕ್ಷ್ಮೀ ಬಾರಮ್ಮಾ ನಮ್ಮಮ್ಮ ನೀ ಸೌ (ಭಾಗ್ಯದ)
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆ ಕಾಲ್ಗಳ ಧ್ವನಿಯ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ (ಭಾಗ್ಯದ)
ಕನಕ ವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೇ
ದಿನಕರ ಕೋಟಿ ತೇಜದಿ ಹೊಳೆವ ಜನಕರಾಯನ ಕುಮಾರಿ ಬೇಗ (ಭಾಗ್ಯದ)
ಅತ್ತಿತ್ತಲಗಲದೆ ಭಕ್ತರ ಮನೆಯಲಿ ನಿತ್ಯ ಮಹೋತ್ಸವ ನಿತ್ಯ ಸುಮಂಗಳ
ಸತ್ಯವ ತೋರುವ ಸಾಧು ಸಜ್ಜನರ ಚಿತ್ತದಿ ಹೊಳೆವಾ ಪುತ್ಥಳಿ ಬೊಂಬೆ (ಭಾಗ್ಯದ)
ಸಂಖ್ಯೆ ಇಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜ ಲೋಚನೆ ವೆಂಕಟರಮಣನ ಬಿಂಕದ ರಾಣೀ (ಭಾಗ್ಯದ)
ಸಕ್ಕರೆ ತುಪ್ಪದ ಕಾಲುವೆ ಹರಿಸಿ ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿ ರಂಗನ ಚೊಕ್ಕ ಪುರಂದರ ವಿಠಲನ ರಾಣಿ (ಭಾಗ್ಯದ)
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Log in to post comments