ಮಣ್ಣಿಂದ ಕಾಯ ಮಣ್ಣಿಂದ
(ರಾಗ ಶಂಕರಾಭರಣ ಅಟತಾಳ )
ಮಣ್ಣಿಂದ ಕಾಯ ಮಣ್ಣಿಂದ ||ಪ||
ಮಣ್ಣಿಂದ ಸಕಲ ದರುಶನಗಳೆಲ್ಲ
ಮಣ್ಣಿಂದ ಸಕಲ ವಸ್ತುಗಳೆಲ್ಲ
ಮಣ್ಣು ಬಿಟ್ಟವರಿಗೆ ಆಧಾರವಿಲ್ಲ
ಅಣ್ಣಗಳಿರೆಲ್ಲರು ಕೇಳಿರಯ್ಯ ||ಅ||
ಅನ್ನ ಉದಕ ಊಟವೀಯೋದು ಮಣ್ಣು
ಬಣ್ಣ ಭಂಗಾರ ಬೊಕ್ಕಸವೆಲ್ಲ ಮಣ್ಣು
ಉನ್ನತವಾದ ಪರ್ವತವೆಲ್ಲ ಮಣ್ಣು
ಕಣ್ಣು ಮೂರುಳ್ಳವನ ಕೈಲಾಸ ಮಣ್ಣು ||
ದೇವರ ಗುಡಿ ಮಠ ಮನೆಯೆಲ್ಲ ಮಣ್ಣು
ಆವಾಗ ಅಡುವ ಮಡಕೆಯು ತಾ ಮಣ್ಣು
ಕೋವಿದರಸರ ಕೋಟೆಗಳೆಲ್ಲ ಮಣ್ಣು
ಪಾವನ ಗಂಗೆಯ ತಡಿಯೆಲ್ಲ ಮಣ್ಣು ||
ಭಕ್ತ ಭರಣ ಧಾನ್ಯ ಬೆಳವುದೆ ಮಣ್ಣು
ಸತ್ತರವನು ಹುಳಿ ಸುಡುವುದೆ ಮಣ್ಣು
ಉತ್ತಮವಾದ ವೈಕುಂಠವೆ ಮಣ್ಣು
ಪುರಂದರವಿಠಲನ್ನ ಪುರವೆಲ್ಲ ಮಣ್ಣು ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments