ರಾಘವೇಂದ್ರ ತೀರ್ಥನೀತ ರಾಜಿಸುವಾತ

ರಾಘವೇಂದ್ರ ತೀರ್ಥನೀತ ರಾಜಿಸುವಾತ

ರಾಘವೇಂದ್ರ ತೀರ್ಥನೀತ ರಾಜಿಸುವಾತ || ಪ || ಪಾಪೌಘಗಳೆಲ್ಲವ ನೋಡಿಸಿ ಪುಣ್ಯಗಳೀವಾತಾ || ಅ || ಬಣ್ಣ ಬಣ್ಣದಿಂದ ಬಹಳ ಬೋಧಿಸುವಾತ - ಬಹಳ ಸಣ್ಣ ದೊಡ್ಡಭೀಷ್ಟಗಳ ಸಾಧಿಸುವಾತಾ ಪುಣ್ಯವಂತರಿಂದ ಬಹು ಪೂಜೆಗೊಂಬಾತ - ನಮಗೆ ಕಣ್ಣ ಹಬ್ಬವಾಗುವಂತೆ ಕಾಣಿಸುವಾತಾ || ೧ || ಕಾಮಕ್ರೋಧಾದಿಗಳನೆ ಕಾಲಲೊದ್ದಾತ - ಈತ ವ್ಯೋಮಕೇಶನಂತೆ ನಾಲ್ಕು ವೇದ ಪ್ರಖ್ಯಾತಾ ಭೂಮಿಯೊಳು ದುರ್ವಾದಿಗಳನೆ ಭೂರಿ ಗೆದ್ದಾತ - ಪ್ರೌಢ ಶ್ರೀಮಧ್ವಯೋಗೀಂದ್ರತೀರ್ಥ ಶಿಷ್ಯನೆಂಬಾತಾ || ೨ || ಸಿಧ್ಧವಿದ್ಯೆಗಳಲಿ ಬಹು ಪ್ರಸಿಧ್ಧನಾದಾತಾ - ನಮ್ಮ ಮಧ್ವಶಾಸ್ತ್ರಗಳನೆ ಮಾಡಿಕೊಟ್ಟಾತ ಮಧ್ವೇಶವಿಠ್ಠಲನ ಧ್ಯಾನದಲಿದ್ದಾತ - ತುಂಗ ಭದ್ರತೀರದಲ್ಲಿ ತಾನು ವಾಸವಾದಾತ || ೩ ||
ದಾಸ ಸಾಹಿತ್ಯ ಪ್ರಕಾರ
ಬರೆದವರು