ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ
(ತೋಡಿ ರಾಗ ಛಾಪುತಾಳ)
ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ ||ಪ||
ಯದುಪತಿಯನಗಲಿಸಿದ ಒಮ್ಮಿಂದಲೊಮ್ಮೆ ||ಅ.ಪ||
ಎವೆಯ ಮರೆಯ ಮಾಡಿ ಪೋದ ಯಾಕೋ ವಿಧಿಯೇ
ಸುಳಿಗುರುಳು ಕಡೆಗಣ್ಣ ನೋಟದಿಂದಲಿ
ಕವಕವಿಸಿ ನಗುವ ಮುದ್ದು ಮುಖವನು
ತವಕದಿಂದಲಿ ಮರಳಿ ಮರಳಿ ನೋಡಿದ್ಹೋದೆವೆ ||೧||
ಹಕ್ಕಿಯ ಮ್ಯಾಲುಳ್ಳ ದಯ ನಮ್ಮ ಮ್ಯಾಲೆ
ಇಕ್ಕದೇಕೆ ಹೋದ್ಯೋ ವಿಧಿಯೇ
ರೆಕ್ಕೆ ಎರಡುಳ್ಳರೆ ಮಧುರೆಗೆ ಪೋಗಿ
ಘಕ್ಕನೆ ಶ್ರೀ ಹರಿಯೊಡನೆ ಕೂಡುತಿದ್ದೆವಲ್ಲ ||೨||
ತಂಗೀ ನಮ್ಮೆದೆಯು ಕಲ್ಲಾಗಿ ಇದ್ದೇವೆ
ಹಿಂಗುವರೆ ಸಖಿಯರು ಒಮ್ಮಿಂದಲೊಮ್ಮೆ
ರಂಗವಿಠಲನ್ನ ಅಂಗಸಂಗವ ಬಿಟ್ಟು ಇಂಥ
ಭಂಗಜೀವ ಸುಡಸುಡಲ್ಯಾತಕೋ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments