ಮನ ಶುದ್ಧಿಯಿಲ್ಲದವಗೆ ಮಂತ್ರದ ಫಲವೇನು
ಮನ ಶುದ್ಧಿಯಿಲ್ಲದವಗೆ ಮಂತ್ರದ ಫಲವೇನು
ತನು ಶುದ್ಧಿಯಿಲ್ಲದವಗೆ ತೀರ್ಥ ಫಲವೇನು
ಮಿಂದಲ್ಲಿ ಫಲವೇನು ಮೀನು ಮೊಸಳೆಯಂತೆ
ನಿಂದಲ್ಲಿ ಫಲವೇನು ಶ್ರೀಶೈಲದ ಕಾಗೆಯಂತೆ
ಹೊರಗೆ ಮಿಂದು ಒಳಗೆ ಮೀಯದವರ ಕಂಡು
ಬೆರಗಾಗಿ ನಗುತಿದ್ದ ಪುರಂದರ ವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು
- Read more about ಮನ ಶುದ್ಧಿಯಿಲ್ಲದವಗೆ ಮಂತ್ರದ ಫಲವೇನು
- Log in to post comments